
ಮುಂಬೈ: ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಿ ಎಂದು ಪೊಲೀಸರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.
ಸಿದ್ದೀಕಿ ಅವರ ಪತ್ನಿ ಶೆಹಜೀನ್ ಸಿದ್ದೀಕಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸುವಂತೆ ಮುಂಬೈ ಜಂಟಿ ಪೊಲೀಸ್ ಆಯುಕ್ತರು (ಅಪರಾಧ) ಮತ್ತು ತನಿಖಾಧಿಕಾರಿಗೆ ಸೂಚಿಸಿದೆ.
2024ರ ಅ.12ರಂದು ಬಾಬಾ ಹತ್ಯೆಗೀಡಾಗಿದ್ದರು.
ಮೂರು ಬಾರಿ ಶಾಸಕರಾಗಿದ್ದ ಸಿದ್ದೀಕಿ, ಹಿಂದಿನ ಕಾಂಗ್ರೆಸ್–ಎನ್‌ಸಿಪಿ ಸರ್ಕಾರದಲ್ಲಿ ವಿವಿಧ ಖಾತೆ ನಿರ್ವಹಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಆಘಾಡಿ ಮೈತ್ರಿಕೂಟವನ್ನು ತೊರೆದು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರ್ಪಡೆಗೊಂಡಿದ್ದರು. ಬಾಲಿವುಡ್‌ನ ಖ್ಯಾತನಾಮರೊಂದಿಗೂ ಸಂಪರ್ಕ ಹೊಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.