ADVERTISEMENT

ಬಾಬರಿ ಮಸೀದಿ ಪ್ರಕರಣ: ವಿಚಾರಣೆಗೆ ಹಾಜರಾದ ಉಮಾ ಭಾರತಿ

ಪಿಟಿಐ
Published 2 ಜುಲೈ 2020, 17:10 IST
Last Updated 2 ಜುಲೈ 2020, 17:10 IST
ಸಿಬಿಐ ವಿಶೇಷ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾದ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ –ಪಿಟಿಐ ಚಿತ್ರ
ಸಿಬಿಐ ವಿಶೇಷ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾದ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ –ಪಿಟಿಐ ಚಿತ್ರ   

ಲಖನೌ:ಬಾಬರಿ ಮಸೀದಿ ದ್ವಂಸ ಪ್ರಕರಣ ಸಂಬಂಧ, ಸಿಬಿಐ ವಿಶೇಷ ನ್ಯಾಯಾಲಯದ ಎದುರು ಗುರುವಾರ‌‌‌ ವಿಚಾರಣೆಗೆ ಹಾಜರಾದ ಬಿಜೆಪಿ ಹಿರಿಯ ನಾಯಕಿಉಮಾ ಭಾರತಿ, ಈ ಪ್ರಕರಣದಲ್ಲಿ ಕಾಂಗ್ರೆಸ್‌ ತನ್ನನ್ನು ಅನವಶ್ಯಕವಾಗಿ ಸಿಲುಕಿಸಿದೆ ಎಂದು ಆರೋಪಿಸಿದರು.

‘ರಾಜಕೀಯ ದುರುದ್ದೇಶದಿಂದ ಅಂದಿನ ಕೇಂದ್ರ ಸರ್ಕಾರ ನನ್ನನ್ನು ಸೇರಿದಂತೆ ಇತರ ಕೆಲವರ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ.ರಾಜಕೀಯ ಒತ್ತಡಕ್ಕೆ ಮಣಿದು ಕಲ್ಪಿತಸಾಕ್ಷ್ಯಗಳ ಆಧಾರದ ಮೇಲೆ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಹೇಳಿದರು.

ಪ್ರಕರಣದ ಇತರ ಆರೋಪಿಗಳಾಗಿರುವ ಬಿಜೆಪಿಯ ಹಿರಿಯ ಮುಖಂಡರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ ಮತ್ತು ಕಲ್ಯಾಣ್‌ ಸಿಂಗ್‌ ತಮ್ಮ ಹೇಳಿಕೆಗಳನ್ನು ವಿಡಿಯೊ ಮೂಲಕ ದಾಖಲಿಸುವ ಸಾಧ್ಯತೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.