ಶಾಸಕ ಹುಮಾಯೂನ್ ಕಬೀರ್
ಬಹರಂಪುರ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪೂರ್ಣಗೊಂಡ ಬೆನ್ನಲ್ಲೇ ಪಶ್ಚಿಮ ಬಂಗಾಳದ ರೆಜಿನಗರದಲ್ಲಿ ಬಾಬರಿ ಮಸೀದಿ ಮಾದರಿಯಲ್ಲೇ ನೂತನ ಮಸೀದಿಗೆ ಶನಿವಾರ ಶಿಲಾನ್ಯಾಸ ನೆರವೇರಿದೆ.
ಇದು ಬಿಜೆಪಿ, ಟಿಎಂಸಿ ನಡುವೆ ಜಟಾಪಟಿಗೆ ಕಾರಣವಾಗಿದೆ.
ಮುರ್ಷಿದಾಬಾದ್ ಜಿಲ್ಲೆಯಲ್ಲಿರುವ ರೆಜಿನಗರದಲ್ಲಿ ಟಿಎಂಸಿ ಪಕ್ಷದಿಂದ ಅಮಾನುತುಗೊಂಡಿರುವ ಶಾಸಕ ಹುಮಾಯೂನ್ ಕಬೀರ್ ನೇತೃತ್ವದಲ್ಲಿ ಇಸ್ಲಾಂ ಧರ್ಮದ ಹಲವು ಮುಖಂಡರು ಶಿಲಾನ್ಯಾಸ ನೆರವೇರಿಸಿದ್ದಾರೆ.
ರೆಜಿನಗರರಕ್ಕೆ ಬೆಳಗ್ಗೆಯಿಂದಲೇ ಸಾವಿರಾರು ಜನರು ಬಂದಿದ್ದರು. ರಾಜ್ಯ ಸರ್ಕಾರ ಈ ಪ್ರದೇಶದಲ್ಲಿ ವ್ಯಾಪಕ ಪೊಲೀಸ್ ಭದ್ರತೆ ಮಾಡಿತ್ತು.
ಅಯೋಧ್ಯೆಯಲ್ಲಿ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಧ್ವಂಸ ಮಾಡಲಾಗಿತ್ತು. ನೂತನ ಮಸೀದಿ ನಿರ್ಮಾಣದ ಶಿಲಾನ್ಯಾಸಕ್ಕೆ ಶಾಸಕ ಕಬೀರ್ ಇದೇ ದಿನವನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.