ADVERTISEMENT

ಬಳ್ಳಾರಿ–ಹೊಸಪೇಟೆ ರೈಲ್ವೆ ಮಾರ್ಗ: ಕೇಂದ್ರದಿಂದ ₹2,372 ಕೋಟಿ ಮಂಜೂರು

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2026, 0:30 IST
Last Updated 15 ಫೆಬ್ರುವರಿ 2026, 0:30 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ನವದೆಹಲಿ: ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಹಾಗೂ ನಾಲ್ಕನೇ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಾರ್ಗಗಳ ನಿರ್ಮಾಣಕ್ಕೆ ₹2,372 ಕೋಟಿ ವೆಚ್ಚವಾಗಲಿದೆ. 

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ₹18,509 ಕೋಟಿ ವೆಚ್ಚದಲ್ಲಿ ಮೂರು ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಯಿತು. ಬಳ್ಳಾರಿ–ಹೊಸಪೇಟೆ ನಡುವೆ ಈಗಾಗಲೇ ಜೋಡಿ ಹಳಿ ಮಾರ್ಗ ಇದೆ. ಶನಿವಾರ ಇಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ‘ಈ ಮಾರ್ಗ‌ಗಳ ನಿರ್ಮಾಣದಿಂದ ಇನ್ನಷ್ಟು ಪ್ರಯಾಣಿಕ ಹಾಗೂ ಸರಕು ಸಾಗಣೆ ರೈಲುಗಳ ಆರಂಭಕ್ಕೆ ಅನುಕೂಲವಾಗಲಿದೆ‘ ಎಂದರು.

ಅನುಕೂಲಗಳು

*ಪ್ರಸ್ತಾವಿತ ಯೋಜನೆಯು ಹಂಪಿ, ಬಳ್ಳಾರಿ ಕೋಟೆ, ದರೋಜಿ ಕರಡಿ ಅಭಯಾರಣ್ಯ, ತುಂಗಭದ್ರಾ ಅಣೆಕಟ್ಟು, ಕೆಂಚನಗುಡ್ಡ ಮತ್ತು ವಿಜಯ ವಿಠಲ ದೇವಾಲಯ ಮತ್ತಿತರ ಪ್ರವಾಸಿ ತಾಣಗಳಿಗೆ ರೈಲು ಸಂಪರ್ಕ ಸುಧಾರಿಸಲಿದೆ. 

*ಕಬ್ಬಿಣದ ಅದಿರು, ಸಿಮೆಂಟ್, ಸುಣ್ಣದ ಕಲ್ಲು/ಬಾಕ್ಸೈಟ್, ಆಹಾರ ಧಾನ್ಯ, ಸಕ್ಕರೆ, ರಸಗೊಬ್ಬರಗಳ ಸಾಗಣೆಗೆ ಅನುಕೂಲ. 

*ವರ್ಷಕ್ಕೆ 25 ಮಿಲಿಯನ್ ಟನ್ ಹೆಚ್ಚುವರಿ ಸರಕು ಸಾಗಣೆಗೆ ಅನುಕೂಲ. 

*ಲಾಜಿಸ್ಟಿಕ್ಸ್ ವೆಚ್ಚ ಉಳಿತಾಯ: ಪ್ರತಿವರ್ಷ ₹323 ಕೋಟಿ

*ಉದ್ಯೋಗ ಸೃಷ್ಟಿ: 44 ಲಕ್ಷ ಮಾನವ ದಿನಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.