ADVERTISEMENT

ರಾಜಸ್ಥಾನ: ಅನುಮಾನಾಸ್ಪದ ಬಲೂನ್‌ ಪತ್ತೆ

ಪಿಟಿಐ
Published 24 ಸೆಪ್ಟೆಂಬರ್ 2024, 14:52 IST
Last Updated 24 ಸೆಪ್ಟೆಂಬರ್ 2024, 14:52 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಜೈಸಲ್ಮೇರ್‌ (ರಾಜಸ್ಥಾನ): ರಾಜಸ್ಥಾನದ ಜೈಸಲ್ಮೇರ್‌ ಜಿಲ್ಲೆಯ ಗ್ರಾಮವೊಂದರಲ್ಲಿ ಬಿಳಿ ಬಣ್ಣದ ಸಣ್ಣ ಪೆಟ್ಟಿಗೆ ಹಾಗೂ ಆಂಟೆನಾ ಅಳವಡಿಸಲಾಗಿದ್ದ ಬಲೂನ್‌ ಸೋಮವಾರ ಪತ್ತೆಯಾಗಿದೆ.

ಇದು ಪಾಕಿಸ್ತಾನದಿಂದ ಹಾರಿ ಬಂದಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

ಕಸಂ ಖಾನ್‌ ಕಿ ಢಾಣಿ ಗ್ರಾಮದಲ್ಲಿ ಸಂಶಯಾಸ್ಪದ ವಸ್ತುವೊಂದು ಪತ್ತೆಯಾಗಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಯುತ್ತಿದೆ. ಗುಪ್ತಚರ ಸಂಸ್ಥೆಗಳಿಗೂ ಈ ಬಗ್ಗೆ ಮಾಹಿತಿ ರವಾನಿಸಲಾಗಿದೆ ಎಂದು ಪೊಲೀಸರು ತಿಳಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.