ಬೆಂಗಳೂರು: ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟು, ಕನ್ನಡಿಗರ ಹಾಗೂ ಕರ್ನಾಟಕದವರಿಗೆ ಸಂಬಂಧಿಸಿದ ವಾಹನಗಳ ಮೇಲೆ ದಾಳಿ ಮಾಡಿ ಪುಂಡಾಟ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಇದೇ ವಿಷಯವಾಗಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಎಂಇಎಸ್ ನಡೆಯನ್ನು ವ್ಯಾಪಕವಾಗಿ ಖಂಡಿಸಿದ್ದಾರೆ. ಅದರಲ್ಲೂ #BanMES ಹ್ಯಾಶ್ ಟ್ಯಾಗ್ ಟ್ವಿಟರ್‌ನಲ್ಲಿ ನಂ.1 ಟ್ರೆಂಡಿಂಗ್ ಆಗಿತ್ತು.
ಇದೇ ವಿಷಯವಾಗಿಸುಮಾರು43 ಸಾವಿರ ಟ್ವೀಟ್‌ಗಳುರಾತ್ರಿಯ ವೇಳೆಗೆ ಹೊರಬಿದ್ದಿದ್ದವು.
ಅನೇಕರು ಕನ್ನಡಿಗರಿಗೆ ಹಾಗೂ ಕರ್ನಾಟಕಕ್ಕೆ ಅವಮಾನ ಮಾಡುವ ನಡೆ ಅನುಸರಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿರುವುದಲ್ಲದೇ ಅಮಾಯಕರ ಮೇಲೆ ಭಾಷಾ ವಿಷಯ ಮುಂದಿಟ್ಟುಕೊಂಡು ದಾಳಿ ಮಾಡುವುದು ಸರಿ ಅಲ್ಲ ಎಂದು ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.