ADVERTISEMENT

ಕೊರೊನಾ: ಅಂತರರಾಷ್ಟ್ರೀಯ ವಿಮಾನ ಹಾರಾಟ ನಿಷೇಧ ಏಪ್ರಿಲ್ 14ರ ವರೆಗೆ ವಿಸ್ತರಣೆ

ಏಜೆನ್ಸೀಸ್
Published 27 ಮಾರ್ಚ್ 2020, 3:10 IST
Last Updated 27 ಮಾರ್ಚ್ 2020, 3:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೊರೊನಾ ವೈರಸ್ ಸೋಂಕು (ಕೋವಿಡ್–19) ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ವಿಮಾನ ಹಾರಾಟದ ಮೇಲೆ ವಿಧಿಸಿರುವ ನಿಷೇಧವನ್ನು ಏಪ್ರಿಲ್ 14ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಅಂತರರಾಷ್ಟ್ರೀಯ ವಿಮಾನ ಹಾರಾಟವನ್ನು ಒಂದು ವಾರ ಕಾಲ ನಿಷೇಧಿಸಿ ಕಳೆದ ವಾರ ನಾಗರಿಕ ವಿಮಾನಯಾನ ಸಚಿವಾಲಯ ಆದೇಶಿಸಿತ್ತು. ಆದಾಗ್ಯೂ, ಸರಕುಸಾಗಣೆ ವಿಮಾನಗಳಿಗೆ ನಿಷೇಧ ಅನ್ವಯವಾಗುವುದಿಲ್ಲ ಎಂದು ತಿಳಿಸಿತ್ತು. ದೇಶೀಯ ವಿಮಾನ ಹಾರಾಟವನ್ನೂ ಮಾರ್ಚ್ 31ರವರೆಗೆ ನಿಷೇಧಿಸಿ ಆದೇಶಿಸಿತ್ತು.

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರೈಲು, ಮೆಟ್ರೊ, ಅಂತರ ರಾಜ್ಯ ಬಸ್ ಸೇವೆಯನ್ನೂ ಈಗಾಗಲೇ ಸರ್ಕಾರ ನಿಷೇಧಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.