ADVERTISEMENT

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ: ಭಾರತ ಖಂಡನೆ

ಪಿಟಿಐ
Published 26 ಡಿಸೆಂಬರ್ 2025, 13:52 IST
Last Updated 26 ಡಿಸೆಂಬರ್ 2025, 13:52 IST
ರಣಧೀರ್ ಜೈಸ್ವಾಲ್
ರಣಧೀರ್ ಜೈಸ್ವಾಲ್   

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆದಿರುವ ಮತ್ತೊಬ್ಬ ಹಿಂದೂ ಯುವಕನ ಹತ್ಯೆಯನ್ನು ಖಂಡಿಸಿರುವ ಭಾರತ, ‘ಆರೋಪಿಗಳಿಗೆ ಬಾಂಗ್ಲಾದೇಶ ಶಿಕ್ಷೆ ನೀಡಲಿದೆ ಎನ್ನುವ ನಿರೀಕ್ಷೆಯಲ್ಲಿದ್ದೇವೆ’ ಎಂದು ಹೇಳಿದೆ

ವಾರದ ಸುದ್ದಿಗೋಷ್ಠಿ ನಡೆಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ‘ಕಳೆದ ವಾರ ದೀಪು ದಾಸ್‌ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹಕ್ಕೆ ಬೆಂಕಿ ಹಚ್ಚಿ ಸುಡಲಾಗಿತ್ತು, ಬುಧವಾರ ಅಮೃತ್ ಮಂಡಲ್‌ ಎನ್ನುವ ಇನ್ನೊಬ್ಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಆರೋಪಿಗಳಿಗೆ ಶಿಕ್ಷೆ ನೀಡಲಿದೆ ಎಂಬ ನಿರೀಕ್ಷೆಯಲ್ಲಿದ್ದೇವೆ’ ಎಂದಿದ್ದಾರೆ. 

ಮೃತ ವ್ಯಕ್ತಿ ಅಮೃತ್‌, ಕಾಳಿಮೊಹರ್‌ ಬಳಿಯ ಹೊಸೇನ್‌ದಂಗಾ ಗ್ರಾಮದವನಾಗಿದ್ದು, ‘ಸಾಮ್ರಾಟ್‌ ವಾಹಿನಿ’ ಎಂಬ ಸುಲಿಗೆಕೋರರ ತಂಡಕ್ಕೆ ನಾಯಕನಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಲ್ಲದೇ, ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಸರ್ಕಾರ ಪತನವಾದ ಬಳಿಕ ಅಮೃತ್‌ ದೇಶ ತೊರೆದಿದ್ದ. ಇತ್ತೀಚೆಗಷ್ಟೇ ಗ್ರಾಮಕ್ಕೆ ಹಿಂತಿರುಗಿದ್ದ ಎಂದು ಮಾಹಿತಿ ನೀಡಿದ್ದಾರೆ. 

ADVERTISEMENT

ದೀಪು ಹತ್ಯೆಗೆ ಸಂಬಂಧಿಸಿದಂತೆ ಈವರೆಗೆ 12ಜನರ ಬಂಧನವಾಗಿದೆ. ಆತನ ಹತ್ಯೆಯಿಂದಾಗಿ ವಿದ್ಯಾರ್ಥಿಗಳು, ಬಲಬಂಥೀಯರು ಬೀದಿಗಳಿದು ಪ್ರತಿಭಟಿಸಿದ್ದರು. ಬಾಂಗ್ಲಾದೇಶದ ಹೈಕಮಿಷನ್‌ ಕಚೇರಿ ಎದುರು ಹಾಗೂ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆದಿತ್ತು

ದೀಪು ಅವರ ಮಕ್ಕಳು, ಪತ್ನಿ ಮತ್ತು ಪೋಷಕರನ್ನು ನೋಡಿಕೊಳ್ಳುವುದಾಗಿ ಬಾಂಗ್ಲಾ ಮಧ್ಯಂತರ ಸರ್ಕಾರ ಭರವಸೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.