ADVERTISEMENT

ಅಲ್‌ ಖೈದಾ ನಂಟು: ಅಸ್ಸಾಂನಲ್ಲಿ ಬಾಂಗ್ಲಾ ಪ್ರಜೆ ಸೇರಿ ಐವರ ಬಂಧನ ‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಮಾರ್ಚ್ 2022, 13:03 IST
Last Updated 5 ಮಾರ್ಚ್ 2022, 13:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಉಗ್ರ ಸಂಘಟನೆ ಅನ್ಸರುಲ್ಲಾ ಬಾಂಗ್ಲಾ ಟೀಮ್ (ಎಬಿಟಿ) ಜೊತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಬಾಂಗ್ಲಾ ಪ್ರಜೆ ಸೇರಿದಂತೆ ಐವರನ್ನು ಅಸ್ಸಾಂನ ಬರ್ಪೇಟಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

ಬಾಂಗ್ಲಾ ಮೂಲದ ಉಗ್ರ ಸಂಘಟನೆ ‘ಎಬಿಟಿ’ ಅಲ್‌ ಖೈದಾ ಜೊತೆ ನಂಟು ಹೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಪ್ತಚರ ವರದಿಯ ಆಧಾರದ ಮೇಲೆ ಪಶ್ಚಿಮ ಅಸ್ಸಾಂನ ಬರ್ಪೇಟಾ, ಹೌಲಿ ಮತ್ತು ಕಲ್ಗಾಚಿಯಾ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಐವರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ಜ್ಯೋತಿ ಮಹಾಂತ ಹೇಳಿದ್ದಾರೆ.

ADVERTISEMENT

ಬಾಂಗ್ಲಾದೇಶದ ಪ್ರಜೆಯಾಗಿರುವ ಸೈಫುಲ್ ಇಸ್ಲಾಂ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾನೆ. ಆತ ಬರ್ಪೇಟಾ ಜಿಲ್ಲೆಯ ಮಸೀದಿಯೊಂದರಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದನೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಅಲ್-ಖೈದಾದ ನಂಟು ಹೊಂದಿರುವ ಸಂಘಟನೆಯ ಕಾನೂನುಬಾಹಿರ ಚಟುವಟಿಕೆಗಳನ್ನು ಕಾರ್ಯಗತಗೊಳಿಸಲು ಈ ಐವರು ಯಶಸ್ವಿಯಾಗಿ ತರಬೇತಿ ಪಡೆದಿದ್ದರು ಎಂದು ಮಹಾಂತ ಹೇಳಿದ್ದಾರೆ.

ಹೆಚ್ಚಿನ ತನಿಖೆಗಾಗಿ ಬಂಧಿತರ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.