ADVERTISEMENT

ಸ್ನೇಹದಿಂದ ಯಾವುದೇ ಸಮಸ್ಯೆ ಪರಿಹರಿಸಲು ಸಾಧ್ಯ: ಶೇಖ್ ಹಸೀನಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಸೆಪ್ಟೆಂಬರ್ 2022, 6:20 IST
Last Updated 6 ಸೆಪ್ಟೆಂಬರ್ 2022, 6:20 IST
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು   

ನವದೆಹಲಿ: ಸ್ನೇಹದಿಂದ ಯಾವುದೇ ಸಮಸ್ಯೆಯನ್ನು ಪರಿಹರಿಸಬಹುದು ಎಂದು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮಂಗಳವಾರ ಹೇಳಿದರು.

ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಅವರನ್ನು ರಾಷ್ಟ್ರಪತಿ ಭವನದ ಮುಂಭಾಗ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು.

ರಾಷ್ಟ್ರಪತಿ ಭವನದಲ್ಲಿ ವರದಿಗಾರರ ಜತೆ ಮಾತನಾಡಿದ ಹಸೀನಾ, ಉಭಯ ದೇಶಗಳ ಜನರ ಜೀವನ ಮಟ್ಟ ಸುಧಾರಣೆ, ಬಡತನ ನಿರ್ಮೂಲನೆ ಮತ್ತು ಆರ್ಥಿಕ ಅಭಿವೃದ್ಧಿ ಕುರಿತು ಮೋದಿ ಜತೆ ಚರ್ಚಿಸುವುದಾಗಿ ತಿಳಿಸಿದರು.

ADVERTISEMENT

‘ನಮ್ಮ ಪ್ರಮುಖ ಗುರಿ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಿ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುವುದಾಗಿದೆ. ಸ್ನೇಹದಿಂದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ಹೀಗಾಗಿ ನಾವು ಯಾವತ್ತೂ ಈ ವಿಚಾರಕ್ಕೆ ಆದ್ಯತೆ ನೀಡುತ್ತೇವೆ’ ಎಂದು ಹಸೀನಾ ಹೇಳಿದರು.

‘ಬಾಂಗ್ಲಾ ವಿಮೋಚನಾ ಯುದ್ಧದ ಸಮಯದಲ್ಲಿ ಭಾರತ ನೀಡಿದ ಕೊಡುಗೆಯನ್ನು ಬಾಂಗ್ಲಾದೇಶವು ಯಾವಾಗಲೂ ಸ್ಮರಿಸುತ್ತದೆ’ ಎಂದು ಅವರು ನೆನಪಿಸಿಕೊಂಡರು.

ಹಸೀನಾ ಅವರು ಮೋದಿ ಜತೆ ಮಾತುಕತೆ ನಡೆಸಲಿದ್ದು, ಆ ಬಳಿಕ ಕುಶಿಯಾರಾ ನದಿ ನೀರಿನ ಹಂಚಿಕೆ ಸೇರಿದಂತೆ ಹಲವು ಒಪ್ಪಂದಗಳಿಗೆ ಎರಡೂ ದೇಶಗಳು ಸಹಿ ಹಾಕುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.