ADVERTISEMENT

ಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ 14 ವೈದ್ಯಕೀಯ ವಿದ್ಯಾರ್ಥಿಗಳು ತವರಿಗೆ

ಪಿಟಿಐ
Published 22 ಜುಲೈ 2024, 12:43 IST
Last Updated 22 ಜುಲೈ 2024, 12:43 IST
<div class="paragraphs"><p>ಸ್ವದೇಶಕ್ಕೆ ಮರಳಿದ&nbsp;ಭಾರತೀಯ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ)</p></div>

ಸ್ವದೇಶಕ್ಕೆ ಮರಳಿದ ಭಾರತೀಯ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ)

   

(ಚಿತ್ರ ಕೃಪೆ– ರಾಯಿಟರ್ಸ್)

ಅಹಮದಾಬಾದ್: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ ಗುಜರಾತ್‌ನ 14 ವೈದ್ಯಕೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತವರಿಗೆ ಕರೆತರಲಾಗಿದೆ ಎಂದು ಗುಜರಾತ್‌ ಸರ್ಕಾರ ಸೋಮವಾರ ತಿಳಿಸಿದೆ.

ADVERTISEMENT

14 ವಿದ್ಯಾರ್ಥಿಗಳ ಪೈಕಿ 7 ಮಂದಿ ಭೂರಚ್‌ನವರು, ಅಹಮದಾಬಾದ್ ಹಾಗೂ ಭಾವನಗರದ ಇಬ್ಬರು, ಅಮ್ರೇಲಿ, ಮೆಹ್ಸಾನಾ ಮತ್ತು ಪಟಾನ್ ಜಿಲ್ಲೆಗಳಿಂದ ತಲಾ ಒಬ್ಬರು ವಿದ್ಯಾರ್ಥಿಗಳು ತವರಿಗೆ ಮರಳಿದ್ದಾರೆ. ಇನ್ನೂ ಬಾಂಗ್ಲಾದೇಶದಲ್ಲಿ ಸಿಲುಕಿರುವ 11 ಮಂದಿಯನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಸರ್ಕಾರಿ ನೌಕರಿಗಳಲ್ಲಿ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯು ಬಾಂಗ್ಲಾದೇಶದಲ್ಲಿ ಹಿಂಸಾಚಾರ ರೂಪ ಪಡೆದುಕೊಂಡಿದೆ. ಬಾಂಗ್ಲಾದೇಶದಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳ ಪೋಷಕರು ಆತಂಕದಲ್ಲಿದ್ದರು. ಹೀಗಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ರಾಜ್ಯ ಸರ್ಕಾರಿ ಸಂಸ್ಥೆ ಎನ್‌ಆರ್‌ಜಿ ಫೌಂಡೇಶನ್‌ಗೆ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಲು ಸೂಚಿಸಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಎನ್‌ಆರ್‌ಜಿ ಫೌಂಡೇಶನ್ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಹಾಯವಾಣಿ ಅನ್ನು ಸ್ಥಾಪಿಸಿತ್ತು. ವೈದ್ಯಕೀಯ ವಿದ್ಯಾರ್ಥಿಗಳ ಪೋಷಕರು ಒದಗಿಸಿದ ಮಾಹಿತಿ ಅನ್ನು ಆಧರಿಸಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಮಾತುಕತೆ ನಡೆಸಿ 14 ವಿದ್ಯಾರ್ಥಿಗಳನ್ನು ಕರೆತರಲಾಗಿದ್ದು ಉಳಿದವರನ್ನು ತವರಿಗೆ ಕರೆತರುವ ಪ್ರಯತ್ನ ನಡೆಯುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

ಬಾಂಗ್ಲಾದೇಶದಲ್ಲಿರುವ ಭಾರತೀಯರು ವಿದ್ಯಾರ್ಥಿಗಳಿಗೆ ಹೊರಗೆ ಹೋಗದಂತೆ ಮನೆಯೊಳಗೆ ಇರುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಲಹೆ ನೀಡಿದೆ ಎಂದು ಸರ್ಕಾರ ಹೇಳಿದೆ.

ಸರ್ಕಾರಿ ನೌಕರಿಗಳಲ್ಲಿ ಮೀಸಲಾತಿ ವಿರೋಧಿಸಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಸರ್ಕಾರದ ವಿರುದ್ಧ ಆರಂಭಗೊಂಡಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಂಘರ್ಷದಲ್ಲಿ ನೂರಾರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.