
ಪಿಟಿಐ
ಜಮ್ಮು: ಇಲ್ಲಿನ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಶಂಕಿತ ಬಾಂಗ್ಲಾದೇಶದ ಪ್ರಜೆಯೊಬ್ಬರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
19 ವರ್ಷದ ಷರೀಫ್ ಉಲ್ ಇಸ್ಲಾಮ್ ಎಂಬಾತ ಶಂಕಿತ ವ್ಯಕ್ತಿ. ಜಮ್ಮು ನಗರ ಹೊರ ವಲಯದ ಗಜನಸೂ ಪ್ರದೇಶದಲ್ಲಿ ಈತ ಓಡಾಡುತ್ತಿರುವುದನ್ನು ಗಮನಿಸಿದ ಗಡಿ ಭದ್ರತಾ ಪಡೆ( ಬಿಎಸ್‌ಎಫ್) ಸಿಬ್ಬಂದಿ ವಶಕ್ಕೆ ಪಡೆದಿದ್ದರು. ಪ್ರಾಥಮಿಕ ವಿಚಾರಣೆ ನಂತರ ಹೆಚ್ಚಿನ ತನಿಖೆಗಾಗಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.