ಇ.ಡಿ
(ಸಂಗ್ರಹ ಚಿತ್ರ)
ನವದೆಹಲಿ: ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಹರಿಯಾಣ ಕಾಂಗ್ರೆಸ್ ಶಾಸಕ ರಾವ್ ದಾನ್ ಸಿಂಗ್, ಲೋಹ ತಯಾರಿಕೆ ಕಂಪನಿ ಅಲೈಡ್ ಸ್ಟ್ರಿಪ್ಸ್ ಲಿಮಿಟೆಡ್ (ಎಎಸ್‌ಎಲ್) ಮತ್ತು ಅದರ ಪ್ರವರ್ತಕರಾದ ಮೊಹಿಂದರ್ ಅಗರವಾಲ್, ಗೌರವ್ ಅಗರವಾಲ್ ಹಾಗೂ ಇತರರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
₹1,392 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಮಹೇಂದ್ರಗಢ, ಬಹದ್ದೂರ್‌ಗಢ, ಗುರುಗ್ರಾಮ, ದೆಹಲಿ ಹಾಗೂ ಜೆಮ್‌ಶೆಡ್‌ಪುರ ಸೇರಿದಂತೆ ಸುಮಾರು 15 ಸ್ಥಳಗಳಲ್ಲಿ ಇ.ಡಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಕಂಪನಿಯು ₹1,392 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಲಾಗಿದ್ದು, 2022ರಲ್ಲಿ ಸಿಬಿಐ ಪ್ರಕರಣ ದಾಖಲಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.