ADVERTISEMENT

₹70 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣ: ಹಲವು ರಾಜ್ಯಗಳಲ್ಲಿ ಇ.ಡಿ ದಾಳಿ

ಪಿಟಿಐ
Published 14 ಅಕ್ಟೋಬರ್ 2025, 7:22 IST
Last Updated 14 ಅಕ್ಟೋಬರ್ 2025, 7:22 IST
ಜಾರಿ ನಿರ್ದೇಶನಾಲಯ 
ಜಾರಿ ನಿರ್ದೇಶನಾಲಯ    

ನವದೆಹಲಿ: ₹70 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಹಲವು ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕೇಂದ್ರಾಡಳಿತ ಪ್ರದೇಶ ದೆಹಲಿ ಸಹಿತ ಹೈದರಾಬಾದ್, ಜೈಪುರ ಮತ್ತು ಮುಂಬೈಯಲ್ಲಿ ದಾಳಿ ನಡೆಸಲಾಗಿದೆ.

ಯಶ್‌ದೀಪ್ ಶರ್ಮಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಸಿಬಿಐ ಎಫ್‌ಐಆರ್ ಆಧಾರದಲ್ಲಿ ಇ.ಡಿ, ಪ್ರಕರಣದ ತನಿಖೆ ಕೈಗೆತ್ತಿಕೊಂಡಿದೆ.

ADVERTISEMENT

'ಪಂಜಾಬ್ ಹಾಗೂ ಸಿಂಧ್ ಬ್ಯಾಂಕ್‌ನಿಂದ ತಮ್ಮ ಒಡೆತನದ ಹಾಗೂ ನಿಯಂತ್ರಣದಲ್ಲಿರುವ ಸಂಸ್ಥೆಗಳ ಮೂಲಕ ₹70 ಕೋಟಿ ಸಾಲ ಪಡೆದಿರುವ ಶರ್ಮಾ ಮತ್ತು ಅವರ ಕುಟುಂಬದ ಸದಸ್ಯರು, ವಂಚನೆ ನಡೆಸಿದ್ದಾರೆ' ಎಂದು ಆಪಾದಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.