ಬರೇಲಿ (ಉತ್ತರ ಪ್ರದೇಶ): ಸಂಸತ್ತಿನಲ್ಲಿ ಪ್ಯಾಲೆಸ್ಟೀನ್ ಪರ ಘೋಷಣೆ ಕೂಗುವ ಮೂಲಕ ಸಂವಿಧಾನವನ್ನು ಉಲ್ಲಂಘಿಸಲಾಗಿದೆ ಎಂದು ದೂರಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಹಾಜರಾಗುವಂತೆ ಎಐಎಂಐಎಂ ವರಿಷ್ಠ ಅಸಾದುದ್ದೀನ್ ಓವೈಸಿಗೆ ಸ್ಥಳೀಯ ನ್ಯಾಯಾಲಯವು ಸಮನ್ಸ್ ಜಾರಿಮಾಡಿದೆ.
ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಪ್ಯಾಲೆಸ್ಟೀನ್ ಬೆಂಬಲಿಸಿದ ಓವೈಸಿ ಅವರು ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಕೀಲ ವಿಜೇಂದ್ರ ಗುಪ್ತ ದೂರು ದಾಖಲಿಸಿದ್ದಾರೆ.
ಸಂಸದ/ಶಾಸಕರ ನ್ಯಾಯಾಲಯಕ್ಕೆ ಜುಲೈ 12ರಂದು ಗುಪ್ತ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿತ್ತು. ನಂತರ ಜಿಲ್ಲಾ ನ್ಯಾಯಾಲಯಕ್ಕೆ ಪರಿಷ್ಕೃತ ಅರ್ಜಿ ಸಲ್ಲಿಸಿದ್ದರು.
ಜಿಲ್ಲಾ ನ್ಯಾಯಾಧೀಶ ಸುಧೀರ್ ಅರ್ಜಿ ವಿಚಾರಣೆಗೆ ಸಮ್ಮತಿಸಿದ್ದು, ಜ.7ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಓವೈಸಿಗೆ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ಗುಪ್ತ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.