ADVERTISEMENT

ವಚನ ಟ್ವೀಟ್‌ ಮಾಡುವ ಮೂಲಕ ಬಸವ ಜಯಂತಿ ಶುಭಾಶಯ ಕೋರಿದ ಕೇರಳ ಸಿಎಂ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2020, 8:20 IST
Last Updated 26 ಏಪ್ರಿಲ್ 2020, 8:20 IST
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌   

ತಿರುವನಂತಪುರಂ: ವಿಶ್ವಗುರು ಬಸವಣ್ಣನವರ ವಚನವನ್ನು ಟ್ವೀಟ್‌ ಮಾಡುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಜನತೆಗೆ ಬಸವ ಜಯಂತಿ ಶುಭಾಶಯ ಕೋರಿದ್ದಾರೆ.

ಬಸವ ಜಯಂತಿ ಪ್ರಯುಕ್ತ ಶುಭಾಶಯ ಕೋರಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, 'ನಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಮೀರಲು ವಿಶ್ವಗುರು ಬಸವಣ್ಣ ನಮಗೆ ಮಾರ್ಗದರ್ಶಿಯಾಗಲಿ. ನಾವು ವಿಭಜನೆಯಾಗುವ ಮೂಲಕ ಸಾಂಕ್ರಾಮಿಕ ಪಿಡುಗಿನ ವಿರುದ್ಧದ ಯುದ್ಧವನ್ನು ಗೆಲ್ಲುಲಾಗುವುದಿಲ್ಲ. ಇದನ್ನು ಗೆಲ್ಲಲು ನಮ್ಮೆಲ್ಲರ ಅವಶ್ಯಕತೆ ಇದೆ' ಎಂದು ಅವರು ಟ್ವೀಟಿಸಿದ್ದಾರೆ.

ಇದೇ ವೇಳೆ, 'ಇವನಾರವ ಇವನಾರವ ಇವನಾರವನೆಂದು ಎನಿಸದಿರಯ್ಯ. ಇವ ನಮ್ಮವ ಇವ ನಮ್ಮವ, ಇವ ನಮ್ಮವನೆಂದು ಎನಿಸಯ್ಯ' ಎಂಬ ಬಸವಣ್ಣನವರ ವಚನವನ್ನು ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.