ADVERTISEMENT

ಮನಸುಖ್ ಮಾಂಡವಿಯಾ‌ ಭೇಟಿಯಾದ ಬೊಮ್ಮಾಯಿ: ಡಿಎಪಿ, ಪೊಟ್ಯಾಷ್ ಗೊಬ್ಬರಕ್ಕೆ‌ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2021, 8:04 IST
Last Updated 8 ಅಕ್ಟೋಬರ್ 2021, 8:04 IST
ಮನಸುಖ್ ಮಾಂಡವಿಯಾ‌ ಭೇಟಿಯಾದ ಬೊಮ್ಮಾಯಿ
ಮನಸುಖ್ ಮಾಂಡವಿಯಾ‌ ಭೇಟಿಯಾದ ಬೊಮ್ಮಾಯಿ   

ನವದೆಹಲಿ: ರಾಜ್ಯದಲ್ಲಿನ ರೈತರಿಗೆ ಅನುಕೂಲ ಕಲ್ಪಿಸಲು ಹಿಂಗಾರು ಹಂಗಾಮಿಗೆ 32,000 ಟನ್ ಡಿಎಪಿ ಗೊಬ್ಬರ ಪೂರೈಸುವಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶುಕ್ರವಾರ ಮನವಿ ಸಲ್ಲಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ‌ ಸಚಿವ ಮನಸುಖ್ ಮಾಂಡವಿಯಾ‌ ಅವರನ್ನು ಭೇಟಿ ಮಾಡಿ ಈ ಕುರಿತ‌ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಈ‌ ವಿಷಯ ತಿಳಿಸಿದರು.

ಡಿಎಪಿ ಮಾತ್ರವಲ್ಲದೆ, ರಾಜ್ಯಕ್ಕೆ 10,000 ಟನ್ ಪೊಟ್ಯಾಷ್ ಗೊಬ್ಬರದ ಬೇಡಿಕೆ ಇದೆ. ಅದರ ಪೂರೈಕೆಗೂ ಕ್ರಮ‌ ಕೈಗೊಳ್ಳುವಂತೆ ಕೋರಲಾಗಿದೆ. ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ ಎಂದು ಅವರು ತಿಳಿಸಿದರು.

ಸದ್ಯ ರಾಜ್ಯದಲ್ಲಿ ಯುರಿಯಾ ಗೊಬ್ಬರದ ಕೊರತೆ ಇಲ್ಲ. ಕೊರತೆ ಇರುವ ಗೊಬ್ಬರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ADVERTISEMENT

ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಿಯಾನ ಯಶಸ್ವಿ ಅಗಿರುವ ಬಗ್ಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಶೇ 90ರಷ್ಟು ಜನತೆಗೆ ಮೊದಲ ಹಂತದ ಲಸಿಕೆಯನ್ನೂ, ಶೇ 70ರಷ್ಟು ಅರ್ಹರಿಗೆ ಎರಡನೇ ಹಂತದ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.


ಈಗ ರಾಜ್ಯದಲ್ಲಿ 51 ಲಕ್ಷ ಡೋಸ್ ಲಸಿಕೆ ಸಂಗ್ರಹ ಇದೆ ಎಂದೂ ಅವರು ವಿವರಿಸಿದರು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.