ಚಂಡೀಗಡ: ಪಂಜಾಬ್‌ನ ಬತಿಂಡ ಗ್ರಾಮಾಂತರ ಕ್ಷೇತ್ರದಆಮ್ ಆದ್ಮಿ ಪಕ್ಷದ ಶಾಸಕಿ ರೂಪಿಂದರ್ ಕೌರ್ ರುಬಿ ಅವರು ಪಕ್ಷ ತೊರೆಯುವುದಾಗಿ ಮಂಗಳವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.
’ಆಮ್ ಆದ್ಮಿ ಪಕ್ಷದ ಸದಸ್ಯತ್ವಕ್ಕೆ ನಾನು ತಕ್ಷಣವೇ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಅಂಗೀಕರಿಸಿ’ ಎಂದು ರೂಪಿಂದರ್ ಟ್ವೀಟ್ ಮಾಡಿದ್ದಾರೆ.
ರೂಪಿಂದರ್ ಅವರುಕಾಂಗ್ರೆಸ್ ಸೇರಬಹುದು ಎಂದು ಹೇಳಲಾಗುತ್ತಿದೆ. ರೂಪಿಂದರ್‌ಕೌರ್ ರಾಜೀನಾಮೆಗೆ ಪ್ರತಿಕ್ರಿಯಿಸಿರುವ ಎಎಪಿ ಶಾಸಕ ಮತ್ತು ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹರ್ಪಾಲ್ ಸಿಂಗ್ ಚೀಮಾ, ’ರೂಪಿಂದರ್ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಗೆ ಎಎಪಿಯಿಂದ ಸ್ಪರ್ಧಿಸಲು ಅವಕಾಶ ಸಿಗದ ಕಾರಣ, ಕಾಂಗ್ರೆಸ್ ಸೇರುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.