ಚುನಾವಣಾ ಅಧಿಕಾರಿಗಳು ಬುಧವಾರ ನಡೆಯಲಿರುವ ಮತದಾನಕ್ಕೆ ಮಂಗಳವಾರ ಸಿದ್ಧತಾ ಕಾರ್ಯ ಕೈಗೊಂಡರು
–ಪಿಟಿಐ ಚಿತ್ರ
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಬುಧವಾರ ಮತದಾನ ನಡೆಯಲಿದೆ. ಪ್ರಮುಖವಾಗಿ ಆಮ್ ಆದ್ಮಿ ಪಕ್ಷ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗವು ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ.
ಮತದಾನವು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ನಡೆಯಲಿದೆ. 1.56 ಕೋಟಿ ಮತದಾರರಿರುವ ದೆಹಲಿಯಲ್ಲಿ, 699 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಫೆ.8ರಂದು ಫಲಿತಾಂಶ ಹೊರಬೀಳಲಿದೆ.
ಮತದಾನವು ಶಾಂತಿಯುತವಾಗಿ ನಡೆಯಲು ಆಯೋಗವು ದೊಡ್ಡ ಪ್ರಮಾಣದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ. 220 ಅರೆ ಸೇನಾ ಪಡೆ ಸಿಬ್ಬಂದಿ, 35,626 ಪೊಲೀಸರು, ಗೃಹರಕ್ಷಕ ದಳದ 19 ಸಾವಿರ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಒಟ್ಟು 13,766 ಮತಗಟ್ಟೆಗಳನ್ನು ತೆರೆಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.