ADVERTISEMENT

ಬಂಗಾಳ ಕೊಲ್ಲಿ ವಾಯುಭಾರ ಕುಸಿತ: ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಮೇ 2020, 2:39 IST
Last Updated 12 ಮೇ 2020, 2:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭುವನೇಶ್ವರ‌ (ಒಡಿಶಾ): ದೇಶದಲ್ಲಿ ಕೊರೊನಾ ಸೋಂಕು ಬಿಕ್ಕಟ್ಟು ತಲೆದೋರಿರುವ ನಡುವೆಯೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಮೇ 15, 16ರಂದು ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.

ಆಂದ್ರಪ್ರದೇಶ, ಒಡಿಶಾ, ತಮಿಳುನಾಡು, ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಕರಾವಳಿ ಭಾಗಗಳಾದ್ಯಂತ ಮೇ 15, 16ನೇ ತಾರೀಕಿನಂದು ಭಾರೀ ಮಳೆಯಾಗಲಿದೆ.

ADVERTISEMENT

ಗಂಟೆಗೆ 100 ಕಿ.ಮೀಗೂ ಹೆಚ್ಚು ವೇಗದಲ್ಲಿ ಬೀಸುವ ಗಾಳಿಯು ದಕ್ಷಿಣದರಾಜ್ಯಗಳ ಕರಾವಳಿ ಪ್ರದೇಶವನ್ನು ಅಪ್ಪಳಿಸಲಿದೆ ಎಂದು ಇಲಾಖೆ ಹೇಳಿದೆ.

ಮಳೆಗಾಲಕ್ಕೂ ಪೂರ್ವ ಉಂಟಾಗುವ ವಾಯುಭಾರ ಕುಸಿತವು ದಕ್ಷಿಣ ಭಾರತದ ಕರಾವಳಿಯ ಮೇಲೆ ಕೆಲವು ನಿರ್ದಿಷ್ಟ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈಗಾಗಲೇ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 12ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.