ADVERTISEMENT

ದೆಹಲಿ ಕಚೇರಿ ಮೇಲೆ ಐಟಿ ದಾಳಿ: ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ ಎಂದ ಬಿಬಿಸಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಫೆಬ್ರುವರಿ 2023, 11:17 IST
Last Updated 14 ಫೆಬ್ರುವರಿ 2023, 11:17 IST
ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ (ಬಿಬಿಸಿ)
ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ (ಬಿಬಿಸಿ)   

ನವದೆಹಲಿ: ದೆಹಲಿಯಲ್ಲಿರುವ ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ (ಬಿಬಿಸಿ) ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ತಪಾಸಣೆ ನಡೆಸುತ್ತಿದ್ದಾರೆ.

ಐಟಿ ದಾಳಿ ಕುರಿತು ಟ್ವೀಟ್ ಮಾಡಿರುವ ಬಿಬಿಸಿ, ‘ಪ್ರಸ್ತುತ ನವದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರಿಗೆ ನಾವು ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ. ಈ ಪರಿಸ್ಥಿತಿಯನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಲಾಗುವುದು ಎಂದು ನಾವು ಭಾವಿಸುತ್ತೇವೆ’ ಎಂದು ಬರೆದುಕೊಂಡಿದೆ.

2002ರ ಗುಜರಾತ್‌ ಕೋಮು ಗಲಭೆ ಕುರಿತು ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿದ್ದಕ್ಕಾಗಿ ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ (ಬಿಬಿಸಿ) ಇತ್ತೀಚೆಗೆ ವ್ಯಾಪಕ ಚರ್ಚೆಗೆ ಗುರಿಯಾಗಿತ್ತು.

ADVERTISEMENT

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.