ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಸರಪಂಚ್ ಸಂತೋಷ್ ದೇಶಮುಖ್ ಅವರನ್ನು ಹತ್ಯೆಗೈದ ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು ಎಂದು ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಧನಂಜಯ ಮುಂಡೆ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ತ್ವರಿತ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ನಾಗ್ಪುರದಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶದಲ್ಲಿಯೂ ತಾವು ಈ ವಿಚಾರವನ್ನು ಪ್ರಸ್ತಾಪಿಸಿದ್ದಾಗಿಯೂ ಹೇಳಿದರು.
‘ಪ್ರಕರಣವನ್ನು ಅಪರಾಧ ತನಿಖಾ ದಳವು (ಸಿಐಡಿ) ಸೂಕ್ತ ರೀತಿಯಲ್ಲಿಯೇ ತನಿಖೆ ನಡೆಸುತ್ತಿದೆ. ವಿಚಾರಣೆಯಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡದ ಕಾರಣ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯವೂ ಇಲ್ಲ’ ಎಂದು ಅವರು ಇದೇ ವೇಳೆ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.