ADVERTISEMENT

'ಇಂದೋರ್' ದೇಶದ ಮೊದಲ ಭಿಕ್ಷಾಟನೆ ಮುಕ್ತ ನಗರ

ಪಿಟಿಐ
Published 9 ಮೇ 2025, 6:19 IST
Last Updated 9 ಮೇ 2025, 6:19 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಭೋಪಾಲ್; ಇಂದೋರ್‌ ದೇಶದ ಮೊದಲ ಭಿಕ್ಷಾಟನೆ ಮುಕ್ತ ನಗರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಇಂದೋರ್‌ನಲ್ಲಿ ‘ಭಿಕ್ಷಾ ವೃತ್ತಿ ಮುಕ್ತ ಭಾರತ’ ಅಭಿಯಾನವನ್ನು ಪ್ರಾರಂಭಿಸುವ ಮೊದಲು ನಗರದ ಬೀದಿಗಳಲ್ಲಿ ಸುಮಾರು 5,000 ಭಿಕ್ಷುಕರಿದ್ದರು. ಅಭಿಯಾನದ ಬಳಿಕ ಇಂದೋರ್ ದೇಶದ ಮೊದಲ ಭಿಕ್ಷಾಟನೆ ಮುಕ್ತ ನಗರವಾಗಿದೆ ಎಂದು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ತಿಳಿಸಿದ್ದಾರೆ.

ADVERTISEMENT

ಈ ಅಭಿಯಾನದಡಿ ನಗರದಲ್ಲಿ ಭಿಕ್ಷುಕರಿಗೆ ಉದ್ಯೋಗ ಹುಡುಕಲು ಸಹಾಯ ಮಾಡುವ ಮೂಲಕ ಪುನರ್ವಸತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಶಾಲೆಗಳಿಗೆ ದಾಖಲಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

ಭಿಕ್ಷಾಟನೆ ನಿರ್ಮೂಲನೆಗಾಗಿ ನಾವು ಪ್ರಾರಂಭಿಸಿದ ಅಭಿಯಾನವು ಒಂದು ಮಾದರಿಯಾಗಿದೆ. ಈ ಅಭಿಯಾನವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮತ್ತು ವಿಶ್ವಬ್ಯಾಂಕ್ ಸಹ ಗುರುತಿಸಿದೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.

ಭಿಕ್ಷಾಟನೆಯ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡುವವರಿಗೆ ₹1 ಸಾವಿರ ಬಹುಮಾನವನ್ನು ನೀಡಲಾಗುತ್ತದೆ ಎಂದು ಘೋಷಿಸಲಾಗಿತ್ತು. ಇದುವರೆಗೆ ಅನೇಕ ಜನರು ಬಹುಮಾನವನ್ನು ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು, ಭಿಕ್ಷಾಟನೆ ನಿರ್ಮೂಲನೆಗಾಗಿ ‘ಭಿಕ್ಷಾ ವೃತ್ತಿ ಮುಕ್ತ ಭಾರತ’ ಯೋಜನೆಯನ್ನು 10 ನಗರಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಿತ್ತು. ಈ ನಗರಗಳ ಪೈಕಿ ಇಂದೋರ್‌ ಕೂಡ ಒಂದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.