ಹೈದರಾಬಾದ್‌ನ ಬೇಗಂಪೇಟ್ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ
– ಎ.ಐ ಚಿತ್ರ
ಹೈದರಾಬಾದ್: ನಗರದಲ್ಲಿರುವ ಬೇಗಂಪೇಟ್ ವಿಮಾನ ನಿಲ್ದಾಣಕ್ಕೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಬಳಿಕ ಅದು ಹುಸಿ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ ಏರ್‌ಪೋರ್ಟ್ ಪ್ರಾಧಿಕಾರಕ್ಕೆ ಬೆದರಿಕೆ ಇ–ಮೇಲ್ ಬಂದಿದೆ. ತಕ್ಷಣವೇ ಪರಿಶೀಲನೆ ನಡೆಸಲಾಗಿದೆ. ಬಾಂಬ್ ನಿಷ್ಕ್ರೀಯ ದಳ ಹಾಗೂ ಇತರ ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪರಿಶೀಲನೆ ವೇಳೆ ಅಗ್ನಿಶಾಮಕ ದಳವೂ ಸ್ಥಳದಲ್ಲಿ ಸಜ್ಜಾಗಿ ನಿಂತಿತ್ತು. ಬಳಿಕ ಅದೊಂದು ಹುಸಿ ಬೆದರಿಕೆ ಎಂದು ಗೊತ್ತಾಯಿತು. ಘಟನೆ ಬಗ್ಗೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ನಗರದ ಹೃದಯಭಾಗದಲ್ಲಿ ಇರುವ ಈ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕ ವಿಮಾನಗಳ ಸೇವೆ ಇಲ್ಲ. ವಿಐಪಿ ವಿಮಾನಗಳು ಇಲ್ಲಿಂದ ಕಾರ್ಯಾಚರಿಸುತ್ತವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.