ADVERTISEMENT

ಬೀಜಿಂಗ್‌ ಜನತಾ ಪಕ್ಷವಾಗಿ ಪರಿವರ್ತನೆಯಾದ ಬಿಜೆಪಿ: ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ನವೆಂಬರ್ 2021, 14:31 IST
Last Updated 27 ನವೆಂಬರ್ 2021, 14:31 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ಬಿಜೆಪಿಯು ಬೀಜಿಂಗ್‌ ಜನತಾ ಪಕ್ಷವಾಗಿ ಪರಿವರ್ತನೆಯಾಗಿದೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಅರುಣಾಚಲ ಪ್ರದೇಶದಲ್ಲಿ ಹಳ್ಳಿಗಳನ್ನು ನಿರ್ಮಿಸಲು ಚೀನಾ ದೇಶಕ್ಕೆ ಬಿಜೆಪಿ ಸರ್ಕಾರವು ಅವಕಾಶ ನೀಡಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಚೀನಾದ ವಿಮಾನ ನಿಲ್ದಾಣವೊಂದನ್ನು ತನ್ನದೆಂದು ತೋರಿಸಿದೆ. ಲಡಾಖ್‌ನಲ್ಲಿನ ಪ್ರದೇಶವನ್ನು ಬಿಜೆಪಿ ಸರ್ಕಾರವು ಚೀನಾಕ್ಕೆ ಬಿಟ್ಟುಕೊಟ್ಟಿದೆ‘ ಎಂದು ಟೀಕಿಸಿದ್ದಾರೆ.

‘ಬಿಜೆಪಿಯು ಬೀಜಿಂಗ್ ಜನತಾ ಪಕ್ಷವಾಗಿ ಪರಿವರ್ತನೆಯಾಗಿದೆ‘ ಎಂದು ಮಲ್ಲಿಕಾರ್ಜುನ್‌ ಖರ್ಗೆ ಟ್ವೀಟಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.