ಕೋಲ್ಕತ(ಪಿಟಿಐ): ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹನ್ಸ್‌ಖಾಲಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ(ಸಿಬಿಐ) ಈ ಪ್ರಕರಣದ ಆರೋಪಿಗಳ ಡಿಎನ್ಎ ಪರೀಕ್ಷೆಗೆ ಯೋಜಿಸಿದೆ.
ಇದರಿಂದ ಘಟನೆ ನಡೆದ ಸ್ಥಳದಲ್ಲಿ ಪತ್ತೆಯಾದ ಮಾದರಿಗಳು, ಬಂಧಿತ ಆರೋಪಿಗಳ ಮಾದರಿಗೆ ಹೊಂದಾಣಿಕೆಯಾಗಲಿದೆಯೇ ಎಂಬುದರ ಪತ್ತೆಗಾಗಿ ಡಿಎನ್ಎ ಪರೀಕ್ಷೆಗೆ ನಿರ್ಧರಿಸಲಾಗಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಪ್ರಕರಣದ ಮುಖ್ಯ ಆರೋಪಿಯಾದ ಟಿಎಂಸಿ ಮುಖಂಡನ ಪುತ್ರನ ಮನೆಯಲ್ಲಿ ಏಪ್ರಿಲ್ 4ರಂದು ನಡೆದ ಹುಟ್ಟುಹಬ್ಬದ ಸಂಭ್ರಮದ ಕಾರ್ಯಕ್ರಮದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಘಟನೆ ಬಳಿಕ ಆಕೆ ಮೃತಪಟ್ಟಿದ್ದಳು. ಜೊತೆಗೆ ಆಕೆಯ ಮೃತದೇಹವನ್ನು ಆರೋಪಿಯು ಗನ್ ಪಾಯಿಂಟ್‌ನಲ್ಲಿ ಕೊಂಡೊಯ್ದು, ಸಂಸ್ಕಾರ ನಡೆಸಿದ್ದ ಎಂದು ಆರೋಪಿಸಿ ಸಂತ್ರಸ್ತೆಯ ತಂದೆ ಏಪ್ರಿಲ್ 10ರಂದು ದೂರು ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.