ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗಾಲಿಕುರ್ಚಿಯ ಮೇಲೆ ಕುಳಿತು ತಮ್ಮ ಗಾಯಗೊಂಡ ಕಾಲನ್ನು, ನೋವಿನ ಅರಿವಿಲ್ಲದೇ ಅತ್ತಿತ್ತ ಅಲುಗಾಡಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೊ ಸದ್ಯ ಮಮತಾ ವಿರುದ್ಧದ ಟೀಕೆ ಇಂಬು ನೀಡಿದೆ. 'ಚುನಾವಣೆ ಸಂದರ್ಭದಲ್ಲಿ ಮತದಾರರ ಸಹಾನುಭೂತಿ ಗಿಟ್ಟಿಸಿಕೊಳ್ಳಲು ಮಮತಾ ಆಡುತ್ತಿರುವ ನಾಟಕವಿದು,' ಎಂದು ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಬಿಜೆಪಿ ನಾಯಕರಾದ ತೇಜೀಂದರ್ ಬಗ್ಗಾ, ಪ್ರಣಯ್ ರಾಯ್, ಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ಸೇರಿದಂತೆ ಹಲವರು ಮಮತಾ ಅವರ ವಿಡಿಯೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ಗಳಲ್ಲಿ ಹಂಚಿಕೊಂಡಿದ್ದಾರೆ.
ವಿಡಿಯೊ ಹಂಚಿಕೊಂಡಿರುವ ಬಿಜೆಪಿ ವಿರುದ್ಧ ಟಿಎಂಸಿ ಕಿಡಿ ಕಾರಿದೆ. 'ಮಹಿಳೆಯರನ್ನು ಹೇಗೆ ಗೌರವಿಸಬೇಕು ಎಂಬುದನ್ನು ಬಿಜೆಪಿ ಕಲಿಯಬೇಕು,' ಎಂದು ಟಿಎಂಸಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.