ADVERTISEMENT

ಕಾರು ಅಪಘಾತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಲೆಗೆ ಗಾಯ

ಪಿಟಿಐ
Published 24 ಜನವರಿ 2024, 10:39 IST
Last Updated 24 ಜನವರಿ 2024, 10:39 IST
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ   

ಬರ್ಧಮಾನ್: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗುವುದನ್ನು ತಪ್ಪಿಸಲು ಚಾಲಕ ಹಠಾತ್‌ ಬ್ರೇಕ್‌ ಹಾಕಿದ ಪರಿಣಾಮ ಅವರ ಹಣೆಗೆ ಗಾಯವಾಗಿದೆ.

ಮಮತಾ ಅವರು ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದರು. ಮುಂಬದಿಯ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿ ಸಲು ಚಾಲಕ ಹಠಾತ್‌ ಬ್ರೇಕ್‌ ಹಾಕಿದ ಪರಿಣಾಮ ಅವರ ಹಣೆ ಗಾಜಿಗೆ ಬಡಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಮತಾ ಅವರು ಪೂರ್ವ ಬರ್ಧಮಾನ್‌ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಪಾಲ್ಗೊಂಡು ಕೋಲ್ಕತ್ತಕ್ಕೆ ಮರಳುತ್ತಿದ್ದರು ಎಂದು ವಿವರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.