ADVERTISEMENT

ಪಶ್ಚಿಮ ಬಂಗಾಳ ವಿಧಾನಸಭಾ ಉಪಸಭಾಪತಿ ಸುಕುಮಾರ್‌ ನಿಧನ

ಪಿಟಿಐ
Published 29 ಅಕ್ಟೋಬರ್ 2020, 10:29 IST
Last Updated 29 ಅಕ್ಟೋಬರ್ 2020, 10:29 IST
ಸುಕುಮಾರ್‌ ಹಂಸದಾ
ಸುಕುಮಾರ್‌ ಹಂಸದಾ   

ಕೋಲ್ಕತ್ತ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳ ವಿಧಾನಸಭಾ ಉಪಸಭಾಪತಿ ಸುಕುಮಾರ್‌ ಹಂಸದಾ (63)ಅವರು ಮಂಗಳವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಎರಡು ಬಾರಿ ಜಾರ್‌ಗ್ರಾಮ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಪಶ್ಚಿಮಾಂಚಲ್‌ ಉನ್ನಾಯನ್ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಎರಡು ತಿಂಗಳಿನಿಂದ ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವಿಧಾನಸಭಾಧ್ಯಕ್ಷ ಭೀಮಾನ್ ಬ್ಯಾನರ್ಜಿ ತಿಳಿಸಿದರು.

ಸುಕುಮಾರ್ ಅವರು ಮೊದಲು ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ಕೊಲ್ಕತ್ತದ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.