ADVERTISEMENT

ಕೋವಿಡ್‌–19: ಪಶ್ಚಿಮ ಬಂಗಾಳದಲ್ಲಿ ಜುಲೈ 31ರವರೆಗೂ ಲಾಕ್‌ಡೌನ್‌ ಮುಂದುವರಿಕೆ

ಏಜೆನ್ಸೀಸ್
Published 24 ಜೂನ್ 2020, 16:06 IST
Last Updated 24 ಜೂನ್ 2020, 16:06 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೊಲ್ಕತ್ತಾ: ಕೊರೊನಾ ವೈರಸ್‌ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಜುಲೈ 31ರವರೆಗೂ ಲಾಕ್‌ಡೌನ್‌ ವಿಸ್ತರಿಸಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಮಧ್ಯಾಹ್ನ ಸರ್ವ ಪಕ್ಷಗಳ ಸಭೆ ಕರೆದು ಕೊರೊನಾ ಸೋಂಕಿನ ಬಗ್ಗೆ ಪರಾವರ್ಶೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಲಾಕ್‌ಡೌನ್‌ ಅನ್ನು ಜುಲೈ 31ರವರೆಗೂ ವಿಸ್ತರಿಸಿರುವುದಾಗಿ ತಿಳಿಸಿದ್ದಾರೆ.

ಬಂಗಾಳದಲ್ಲಿ ಇಂದು 445 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು 11 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 15,173 ಪ್ರಕರಣಗಳು ದಾಖಲಾಗಿದ್ದು ಇಂದಿನವರೆಗೂ 591 ಜನರು ಸಾವನ್ನಪ್ಪಿದ್ದಾರೆ. 4,890 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ರಾಜ್ಯದಲ್ಲಿ ಈಗ ಇರುವ ಸಡಿಲಿಕೆಯೇ ಮುಂದುವರೆಯಲಿದ್ದು, ಶಾಲಾ–ಕಾಲೇಜುಗಳು ಜುಲೈ 31ರವರೆಗೂ ಮುಚ್ಚಿರಲಿವೆ ಬಂಗಾಳ ಸರ್ಕಾರದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.