ನವದೆಹಲಿ:ಅಪರಾಧಿಗಳಿಗೆ ಉತ್ತೇಜನ ನೀಡುವವರನ್ನು ಪಶ್ಚಿಮ ಬಂಗಾಳದ ಜನತೆ ಕ್ಷಮಿಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಬಿರ್‌ಭೂಮ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಸಜೀವ ದಹನವಾಗಿದ್ದರು.
ಇದನ್ನೂ ಓದಿ:ಬಿರ್ಭೂಮ್ ಹತ್ಯೆ: ರಾಜಕೀಯ ಬಣ್ಣ ಲೆಕ್ಕಿಸದೆ ಅಪರಾಧಿಗಳ ವಿರುದ್ಧ ಕ್ರಮ, ಮಮತಾ
ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ರಾಜ್ಯ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡಲು ಸಿದ್ಧವಿರುವುದಾಗಿ ಭರವಸೆ ನೀಡಿದ್ದಾರೆ.
ಅಪರಾಧಿಗಳನ್ನು ಬಂಧಿಸಲು ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಸಹಾಯ ಬೇಕಿದ್ದರೂ ನೀಡಲು ಸಿದ್ಧರಾಗಿದ್ದೇವೆ. ತಪ್ಪಿತ್ತಸ್ಥರ ವಿರುದ್ಧ ಪಶ್ಚಿಮ ಬಂಗಾಳದ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.