ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಬಳಿಕ ನಡೆದ ಹತ್ಯೆ ಮತ್ತು ಅತ್ಯಾಚಾರದ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಗುರುವಾರ ಆದೇಶಿಸಿದೆ.
ಜತೆಗೆ, ಚುನಾವಣೆ ಬಳಿಕ ನಡೆದಿದೆ ಎನ್ನಲಾದ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ ಎಲ್ಲ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆಯೂ ನ್ಯಾಯಾಲಯ ಆದೇಶ ನೀಡಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ಈ ಆದೇಶ ನೀಡಿದೆ. ಈ ಎರಡು ತನಿಖೆಗಳ ಬಗ್ಗೆ ನ್ಯಾಯಾಲಯವು ನಿಗಾವಹಿಸಲಿದೆ ಎಂದು ಪೀಠ ತಿಳಿಸಿದೆ. ಮುಂದಿನ ಆರು ವಾರಗಳಲ್ಲಿ ತನಿಖೆಯ ಪ್ರಗತಿಯನ್ನು ಸಲ್ಲಿಸಬೇಕು ಎಂದು ಪೀಠವು ಸಿಬಿಐಗೆ ನಿರ್ದೇಶನ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.