ADVERTISEMENT

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ಮತ್ತೆ ಮೂರು ಎಫ್‌ಐಆರ್‌ ದಾಖಲಿಸಿದ ಸಿಬಿಐ

ಪಿಟಿಐ
Published 31 ಆಗಸ್ಟ್ 2021, 9:41 IST
Last Updated 31 ಆಗಸ್ಟ್ 2021, 9:41 IST
ಸಿಬಿಐ ಲಾಂಛನ
ಸಿಬಿಐ ಲಾಂಛನ   

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರ ಕುರಿತು ತನಿಖೆ ಆರಂಭಿಸಿರುವ ಸಿಬಿಐ, ಎರಡು ಸ್ಥಳಗಳಲ್ಲಿ ಹೊಸದಾಗಿ ಮೂರು ಎಫ್‌ಐಆರ್‌ಗಳನ್ನು ದಾಖಲಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪೂರ್ವಮೇದಿನಿಪುರ ಜಿಲ್ಲೆಯ ನಂದಿಗ್ರಾಮ ಹಾಗೂ ಕೂಚ್‌ಬಿಹಾರ್‌ನ ಸೀತಾಲ್‌ಕುರ್ಚಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿ ಹೊಸದಾಗಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಇದರೊಂದಿಗೆ, ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿ ಈ ವರೆಗೆ 31 ಪ್ರಕರಣಗಳನ್ನು ದಾಖಲಿಸಿದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT