ಸಿಪಿಐ
ನವದೆಹಲಿ: ಯಾವುದೇ ಪರಿಶೀಲನೆ ನಡೆಸದೆಯೇ ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರನ್ನು ಗುರಿ ಮಾಡಲಾಗುತ್ತಿದೆ ಎಂದು ಸಿಪಿಐ ಶನಿವಾರ ಆರೋಪಿಸಿದೆ.
ಸರ್ಕಾರವು ಪ್ರಕ್ರಿಯೆಯ ಅನುಸಾರ ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಕ್ಷವು ಆಗ್ರಹಿಸಿದೆ.
‘ಅಮಾನವೀಯ ನಡೆಯನ್ನು ಮತ್ತು ಶಂಕಿತ ಬಾಂಗ್ಲಾ ಪ್ರಜೆಗಳ ಗಡೀಪಾರನ್ನು ಪಕ್ಷವು ಖಂಡಿಸುತ್ತದೆ’ ಎಂದು ಹೇಳಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರನ್ನು ಗುರಿ ಮಾಡುತ್ತಿವೆ ಮತ್ತು ಅವರನ್ನು ಬಾಂಗ್ಲಾದೇಶಕ್ಕೆ ತಳ್ಳಲಾಗುತ್ತಿದೆ ಎಂದು ಹೇಳಿದೆ.
ಕೆಲವು ವರದಿಗಳ ಪ್ರಕಾರ ನೈಜ ಭಾರತೀಯ ಪ್ರಜೆಗಳನ್ನೂ ಬಂಧಿಸಿ, ಬಾಂಗ್ಲಾದೇಶಕ್ಕೆ ಕಳುಹಿಸಲಾಗುತ್ತಿದೆ ಎಂದು ಆರೋಪಿಸಿದೆ.
ಅಕ್ರಮ ವಲಸಿಗರನ್ನು ಗುರುತಿಸಲು ಸರ್ಕಾರ ಧರ್ಮವನ್ನು ಬಳಕೆ ಮಾಡಬಾರದು ಎಂದು ಸಿಪಿಐ ಆಗ್ರಹಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.