ADVERTISEMENT

ಆ್ಯಸಿಡ್ ದಾಳಿ: ದೇಶದಲ್ಲೇ ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣ

ಪಿಟಿಐ
Published 10 ಡಿಸೆಂಬರ್ 2023, 15:46 IST
Last Updated 10 ಡಿಸೆಂಬರ್ 2023, 15:46 IST
<div class="paragraphs"><p>(ಐ ಸ್ಟೋಕ್ ಚಿತ್ರ)</p></div>

(ಐ ಸ್ಟೋಕ್ ಚಿತ್ರ)

   

ಬೆಂಗಳೂರು: 2022ರಲ್ಲಿ ದೇಶದಲ್ಲೇ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿ ಪ್ರಕರಣ ನಡೆದಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಮಂಡಳಿ (ಎನ್‌ಸಿಆರ್‌ಬಿ) ವರದಿ ತಿಳಿಸಿದೆ.

ಎನ್‌ಸಿಆರ್‌ಬಿ ವರದಿ ಪ್ರಕಾರ, 19 ಮೆಟ್ರೊಪಾಲಿಟನ್ ನಗರಗಳ ಪೈಕಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಆ್ಯಸಿಡ್ ದಾಳಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಪೊಲೀಸರು ಆರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

2022ರಲ್ಲಿ ದೆಹಲಿಯಲ್ಲಿ ಏಳು, ಅಹಮದಾಬಾದ್‌ನಲ್ಲಿ ಐದು ಇಂತಹ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಅನುಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ.

ಕಳೆದ ವರ್ಷ ಆ್ಯಸಿಡ್ ದಾಳಿಗೆ ಎಂಟು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಈ ವರದಿ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.