ADVERTISEMENT

ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್‌ ಶರ್ಮಾ ಇಂದು ಪ್ರಮಾಣ ವಚನ

ಪಿಟಿಐ
Published 15 ಡಿಸೆಂಬರ್ 2023, 3:18 IST
Last Updated 15 ಡಿಸೆಂಬರ್ 2023, 3:18 IST
<div class="paragraphs"><p>ಭಜನ್‌ ಲಾಲ್‌ ಶರ್ಮಾ</p></div>

ಭಜನ್‌ ಲಾಲ್‌ ಶರ್ಮಾ

   

ಪಿಟಿಐ ಚಿತ್ರ

ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್‌ ಶರ್ಮಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ADVERTISEMENT

ದಿಯಾ ಕುಮಾರಿ ಮತ್ತು ಪ್ರೇಮಚಂದ್ ಬೈರವ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

ಜೈಪುರದ ರಾಯಲ್‌ ಆಲ್ಬರ್ಟ್‌ ಹಾಲ್‌ ಎದುರು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

200 ಸ್ಥಾನಗಳ ಪೈಕಿ ನವೆಂಬರ್ 25 ರಂದು 199 ಕ್ಷೇತ್ರಗಳಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆದ್ದು ಬೀಗಿತ್ತು. ಕಾಂಗ್ರೆಸ್ 69 ಸ್ಥಾನಗಳನ್ನು ಪಡೆದಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.