ನವದೆಹಲಿ/ಮುಂಬೈ: ಮಹಾರಾಷ್ಟ್ರದ ಭಂಡಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತ ಮತ್ತು ಅದರಲ್ಲಿ 10 ನವಜಾತ ಶಿಶುಗಳು ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಮಹಾರಾಷ್ಟ್ರದ ಭಂಡಾರದ ಆಸ್ಪತ್ರೆಯ ದುರಂತದಲ್ಲಿ ನಾವು ಅಮೂಲ್ಯವಾದ ಮುಗ್ಧ ಜೀವಗಳನ್ನು ಕಳೆದುಕೊಂಡಿದ್ದೇವೆ. ದುಃಖಿತ ಕುಟುಂಬಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.
ತನಿಖೆಗೆ ಫಡಣವೀಸ್ ಒತ್ತಾಯ:‘ಭಂಡಾರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಅವಘಡ ಮನಸ್ಸಿಗೆ ತುಂಬಾ ನೋವನ್ನು ನೀಡಿದೆ’ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ತಿಳಿಸಿದ್ದಾರೆ.
‘ಸರ್ಕಾರ ಈ ಘಟನೆ ಬಗ್ಗೆ ತನಿಖೆ ನಡೆಸಬೇಕು. 10 ನವಜಾತ ಶಿಶುಗಳ ಸಾವಿಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.