ADVERTISEMENT

ಕೋವಾಕ್ಸಿನ್ ಬೆಲೆಯಲ್ಲಿ ₹200 ಇಳಿಕೆ ಮಾಡಿದ ಭಾರತ್ ಬಯೋಟೆಕ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಏಪ್ರಿಲ್ 2021, 16:23 IST
Last Updated 29 ಏಪ್ರಿಲ್ 2021, 16:23 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ರಾಜ್ಯ ಸರ್ಕಾರಗಳಿಗೆ ನಿಗದಿಪಡಿಸಲಾದ ‘ಕೋವ್ಯಾಕ್ಸಿನ್‌’ ಲಸಿಕೆಯ ಪ್ರತಿ ಡೋಸ್‌ನ ದರವನ್ನು ₹ 200 ಕಡಿತಗೊಳಿಸಲು ಭಾರತ್‌ ಬಯೋಟೆಕ್‌ ಗುರುವಾರ ನಿರ್ಧರಿಸಿದೆ.

ಕೋವ್ಯಾಕ್ಸಿನ್‌ ಲಸಿಕೆಯ ಪ್ರತಿ ಡೋಸ್‌ಗೆ ರಾಜ್ಯಗಳಿಗೆ ₹600 ಹಾಗೂ ಖಾಸಗಿ ಆಸ್ಪತ್ರೆಗಳಿಗೆ ₹ 1,200 ದರ ನಿಗದಿಪಡಿಸಲಾಗಿತ್ತು. ಈಗ ಅದನ್ನು ₹ 400ಕ್ಕೆ ಇಳಿಸಲಾಗಿದೆ.

ಸೀರಂ ಇನ್‌ಸ್ಟಿಟ್ಯೂಟ್‌ ಲಸಿಕೆಯ ದರವನ್ನು ₹100 ಕಡಿತಗೊಳಿಸಿದ ಮರುದಿನವೇ ಭಾರತ್‌ ಬಯೋಟೆಕ್‌ ಈ ನಿರ್ಧಾರ ತೆಗೆದುಕೊಂಡಿದೆ.

ADVERTISEMENT

‘ಆರೋಗ್ಯ ವ್ಯವಸ್ಥೆಯಲ್ಲಿನ ಅಗಾಧ ಸವಾಲುಗಳನ್ನು ಮನಗಂಡು, ದರ ಕಡಿತಗೊಳಿಸಲಾಗಿದೆ’ ಎಂದು ಭಾರತ್‌ ಬಯೋಟೆಕ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಕೃಷ್ಣ ಎಲ್ಲಾ ತಿಳಿಸಿದ್ದಾರೆ.

ಲಸಿಕೆ ದರಗಳ ಬಗ್ಗೆ ರಾಜಕೀಯ ಪಕ್ಷಗಳು ಹಾಗೂ ವಿವಿಧ ವಲಯಗಳಿಂದ ಟೀಕೆಗಳು ವ್ಯಕ್ತವಾಗಿದ್ದವು. ಏಕರೂಪದ ದರ ನಿಗದಿಪಡಿಸಬೇಕು ಎಂದು ರಾಜಕೀಯ ಪಕ್ಷಗಳು ಒತ್ತಾಯಿಸಿದ್ದವು.

ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ಸೀರಂ ಇನ್‌ಸ್ಟಿಟ್ಯೂಟ್ಕೋವಿಶೀಲ್ಡ್ ಲಸಿಕೆ ಕೇಂದ್ರ ಸರ್ಕಾರಕ್ಕೆ ಪ್ರತಿ ಡೋಸ್‌ಗೆ ₹150ಕ್ಕೆ ಲಭ್ಯವಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.