ADVERTISEMENT

2021ರ ಎರಡನೇ ತ್ರೈಮಾಸಿಕದಲ್ಲಿ ಕೋವಾಕ್ಸಿನ್ ಬಿಡುಗಡೆಗೆ ಭಾರತ್ ಬಯೋಟೆಕ್ ಚಿಂತನೆ

ಪಿಟಿಐ
Published 1 ನವೆಂಬರ್ 2020, 7:38 IST
Last Updated 1 ನವೆಂಬರ್ 2020, 7:38 IST
ಸಾಂದರ್ಭಿಕ ಚಿತ್ರ: ಕೃಪೆ – ರಾಯಿಟರ್ಸ್
ಸಾಂದರ್ಭಿಕ ಚಿತ್ರ: ಕೃಪೆ – ರಾಯಿಟರ್ಸ್   

ನವದೆಹಲಿ: ಸಂಬಂಧಪಟ್ಟ ಆಡಳಿತದ ಅನುಮೋದನೆ ದೊರೆತಲ್ಲಿ 2021ರ ಎರಡನೇ ತ್ರೈಮಾಸಿಕದಲ್ಲಿ ಕೋವಾಕ್ಸಿನ್ ಲಸಿಕೆ ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಭಾರತ್ ಬಯೋಟೆಕ್‌ನ ಅಂತರರಾಷ್ಟ್ರೀಯ ಕಾರ್ಯನಿರ್ವಾಹಕ ನಿರ್ದೇಶಕ ಸಾಯಿ ಪ್ರಸಾದ್ ಭಾನುವಾರ ತಿಳಿಸಿದ್ದಾರೆ.

ಮೂರನೇ ಹಂತದ ಪ್ರಯೋಗವನ್ನು ದೇಶದಾದ್ಯಂತ ಯಶಸ್ವಿಯಾಗಿ ಪೂರೈಸುವುದು ಕಂಪನಿಯ ತಕ್ಷಣದ ಆದ್ಯತೆಯಾಗಿದೆ ಎಂದೂ ಅವರು ಹೇಳಿದ್ದಾರೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) – ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಸಹಯೋಗದೊಂದಿಗೆ ಕೋವಾಕ್ಸಿನ್ ಅಭಿವೃದ್ಧಿಪಡಿಸಲಾಗಿದೆ.

‘ಕೊನೆಯ ಹಂತದ ಪ್ರಯೋಗದ ಬಳಿಕ ಲಸಿಕೆಯ ಸುರಕ್ಷತೆ, ದಕ್ಷತೆ ದತ್ತಾಂಶಗಳ ಆಧಾರದಲ್ಲಿ ಎಲ್ಲ ರೀತಿಯ ಅನುಮೋದನೆಗಳು ದೊರೆತರೆ 2021ರ ಎರಡನೇ ತ್ರೈಮಾಸಿಕದಲ್ಲಿ ಲಸಿಕೆ ಬಿಡುಗಡೆ ಮಾಡುವ ಗುರಿ ಹೊಂದಲಾಗಿದೆ’ ಎಂದು ಸಾಯಿ ಪ್ರಸಾದ್ ತಿಳಿಸಿದ್ದಾರೆ.

ಕೋವಾಕ್ಸಿನ್ ಮೂರನೇ ಹಂತದ ಪ್ರಯೋಗಕ್ಕೆ ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಇತ್ತೀಚೆಗೆ ಅನುಮತಿ ನೀಡಿದೆ. ಜತೆಗೆ, ಲಸಿಕೆಯ ಎರಡನೇ ಹಂತದ ಪ್ರಯೋಗದ ದತ್ತಾಂಶ ಹಾಗೂ ಕೆಲವು ಸ್ಪಷ್ಟನೆಗಳನ್ನು ನೀಡಬೇಕು ಎಂದು ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.