ನವದೆಹಲಿ: ಕೋವಿಡ್–19ರ ಚಿಕಿತ್ಸೆಗಾಗಿ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷದೊಳಗಿನವರ ಮೇಲೆ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಸಲು ಭಾರತದ ಪ್ರಧಾನ ಔಷಧ ನಿಯಂತ್ರಕರು (ಡಿಸಿಜಿಐ) ಅನುಮತಿ ನೀಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ಆರೋಗ್ಯವಂತ 525 ಸ್ವಯಂಸೇವಕರ ಮೇಲೆ ಈ ಪ್ರಯೋಗ ನಡೆಯಲಿದೆ.
ಡಿಸಿಜಿಐ ಎಚ್ಚರಿಕೆಯಿಂದ ಪರೀಕ್ಷಿಸಿದ ನಂತರ ವಿಷಯ ತಜ್ಞರ ಸಮಿತಿಯ (ಎಸ್‌ಇಸಿ) ಶಿಫಾರಸನ್ನು ಅಂಗೀಕರಿಸಿದೆ. ಜತೆಗೆ ಕೊವ್ಯಾಕ್ಸಿನ್ ಅನ್ನು 2ರಿಂದ 18 ವರ್ಷದೊಳಗಿನವರ ಮೇಲೆ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಸಲು ಅನುಮತಿ ನೀಡಿದೆ ಎಂದು ಸಚಿವಾಲಯ ತಿಳಿಸಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಸಹಯೋಗದೊಂದಿಗೆ ಭಾರತ್ ಬಯೋಟೆಕ್ ಸ್ಥಳೀಯವಾಗಿ ಕೋವ್ಯಾಕ್ಸಿನ್ ಅನ್ನು ಅಭಿವೃದ್ಧಿಪಡಿಸಿದೆ. ಭಾರತದಲ್ಲಿ ಪ್ರಸ್ತುತ ನಡೆಯುತ್ತಿರುವ ಕೋವಿಡ್-19ರ ಲಸಿಕಾ ಅಭಿಯಾನದಲ್ಲಿ ವಯಸ್ಕರಿಗೆ ಈ ಲಸಿಕೆಯನ್ನು ನೀಡಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.