ADVERTISEMENT

ಕೋವ್ಯಾಕ್ಸಿನ್‌ಗೆ ಮಾನ್ಯತೆ: ನಿರ್ಬಂಧಿತ ತುರ್ತು ಬಳಕೆಯ ದೃಢೀಕರಣ

ಪಿಟಿಐ
Published 11 ಮಾರ್ಚ್ 2021, 20:59 IST
Last Updated 11 ಮಾರ್ಚ್ 2021, 20:59 IST
ಕೋವ್ಯಾಕ್ಸಿನ್‌
ಕೋವ್ಯಾಕ್ಸಿನ್‌   

ನವದೆಹಲಿ: ದೇಶೀಯವಾಗಿ ತಯಾರಿಸಲಾಗಿರುವ, ಭಾರತ್ ಬಯೊಟೆಕ್‌ನ ಕೋವ್ಯಾಕ್ಸಿನ್ ಲಸಿಕೆಯು ಮನುಷ್ಯರ ಮೇಲೆ ಪ್ರಾಯೋಗಿಕ ಪರೀಕ್ಷೆ (ಕ್ಲಿನಿಕಲ್ ಟ್ರಯಲ್‌) ಹಂತವನ್ನು ಪೂರ್ಣಗೊಳಿಸಿದ್ದು, ಇದೀಗ ಅದಕ್ಕೆ ನಿಯಮಿತ ನಿರ್ಬಂಧಿತ ತುರ್ತು ಬಳಕೆಯ ದೃಢೀಕರಣ ನೀಡಲಾಗಿದೆ.

ಸೀರಂ ಇನ್‌ಸ್ಟಿಟ್ಯೂಟ್‌ನ ಕೋವಿಶೀಲ್ಡ್ ಹೊಂದಿರುವ ಮಾನ್ಯತೆಯನ್ನೇ ಈಗ ಕೋವ್ಯಾಕ್ಸಿನ್ ಪಡೆದುಕೊಂಡಿದೆ ಎಂದು ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪಾಲ್ ಅವರು ತಿಳಿಸಿದ್ದಾರೆ.

ಲಸಿಕೆಯು ಕ್ಲಿನಿಕಲ್ ಟ್ರಯಲ್ ಹಂತದ ಕೊನೆಯ ಘಟ್ಟದಲ್ಲಿ ಇದ್ದಾಗಲೇ ತುರ್ತು ಬಳಕೆಗೆ ನಿರ್ಬಂಧಿತ ಅನುಮತಿ ನೀಡಲಾಗಿತ್ತು. 19 ಲಕ್ಷ ಮಂದಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.