ADVERTISEMENT

ಭಾರತ್ ಜೋಡೊ ಯಾತ್ರೆ ದೇಶದ ರಾಜಕೀಯದಲ್ಲಿ ಪರಿವರ್ತನಾತ್ಮಕ ಘಟನೆ: ಕಾಂಗ್ರೆಸ್​

ಪಿಟಿಐ
Published 31 ಜನವರಿ 2026, 15:57 IST
Last Updated 31 ಜನವರಿ 2026, 15:57 IST
<div class="paragraphs"><p>ಭಾರತ್ ಜೋಡೊ ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ</p></div>

ಭಾರತ್ ಜೋಡೊ ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ

   

ಪಿಟಿಐ

ನವದೆಹಲಿ: ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ, ಸಾಮಾಜಿಕ ಧ್ರುವೀಕರಣ ಮತ್ತು ರಾಜಕೀಯ ಸರ್ವಾಧಿಕಾರದ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಆರಂಭವಾದ ಭಾರತ್ ಜೋಡೊ ಯಾತ್ರೆ, ದೇಶದ ರಾಜಕೀಯದಲ್ಲಿ ಒಂದು ಮಹತ್ವದ ಮತ್ತು ಪರಿವರ್ತನಾತ್ಮಕ ಘಟನೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ.

ADVERTISEMENT

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂವಹನ ವಿಭಾಗ) ಜೈರಾಮ್ ರಮೇಶ್, 'ಮೂರು ವರ್ಷಗಳ ಹಿಂದೆ ಈ ದಿನದಂದು, ರಾಹುಲ್‌ ಗಾಂಧಿ ಅವರ, ಸ್ಫೂರ್ತಿದಾಯಕ ಭಾಷಣದೊಂದಿಗೆ ಭಾರತ್ ಜೋಡೊ ಯಾತ್ರೆ ಮುಕ್ತಾಯಗೊಂಡಿತ್ತು.

ರಾಹುಲ್ ಗಾಂಧಿ ನೇತೃತ್ವದಲ್ಲಿ 200ಕ್ಕೂ ಹೆಚ್ಚು ಮಂದಿ 4,000 ಕಿಲೋಮೀಟರ್ ದೂರದ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು. 145 ದಿನಗಳಲ್ಲಿ, 12 ರಾಜ್ಯ, 2 ಕೇಂದ್ರಾಡಳಿತ ಪ್ರದೇಶದಗಳಲ್ಲಿ ಈ ಯಾತ್ರೆ ಸಂಚರಿಸಿತ್ತು ಎಂದು ಹೇಳಿದ್ದಾರೆ.

2022ರ ಸೆ.7ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೊ ಯಾತ್ರೆ 2023ರ ರಂದು ಕೊನೆಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.