ADVERTISEMENT

Bharat Jodo Yatra: ರಾಜ್ಯದಲ್ಲಿ ಬಿಜೆಪಿ ಪತನಕ್ಕೆ ಕ್ಷಣಗಣನೆ– ಜೈರಾಮ್‌ ರಮೇಶ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಅಕ್ಟೋಬರ್ 2022, 6:12 IST
Last Updated 6 ಅಕ್ಟೋಬರ್ 2022, 6:12 IST
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಸಾಗಿದ ಭಾರತ್‌ ಜೋಡೊ ಯಾತ್ರೆ
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಸಾಗಿದ ಭಾರತ್‌ ಜೋಡೊ ಯಾತ್ರೆ   

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೊ ಯಾತ್ರೆಗೆ ಕರ್ನಾಟಕದಲ್ಲಿ ಭಾರೀ ಜನಬೆಂಬಲ ಸಿಗುತ್ತಿದೆ ಎಂದು ಸಂಸದ ಜೈರಾಮ್‌ ರಮೇಶ್‌ ಅಭಿಪ್ರಾಯಪಟ್ಟಿದ್ದಾರೆ.

ಈ ವಿಚಾರವಾಗಿ ‘ಎಎನ್‌ಐ’ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ಜನರಿಂದ ಅದ್ಭುತ ಪ್ರತಿಕ್ರಿಯೆ ದೊರೆಯುತ್ತಿದೆ’ ಎಂದು ತಿಳಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪತನಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ ಎಂಬುದು ಈ ಪ್ರತಿಕ್ರಿಯೆಯಿಂದ ತಿಳಿದುಬರುತ್ತದೆ ಎಂದು ಹೇಳಿದ್ದಾರೆ.

ADVERTISEMENT

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕು ಬೆಳ್ಳಾಳೆಯಿಂದ ಇಂದು ಆರಂಭಗೊಂಡ ಭಾರತ್ ಜೋಡೊ ಪಾದಯಾತ್ರೆ ಜಕ್ಕನಹಳ್ಳಿ ಕ್ರಾಸ್ ತಲುಪಿದೆ. ಇಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪಾಲ್ಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.