ಮುಂಬೈ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ 68ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರದ ವಿರಾಮದ ನಂತರಸೋಮವಾರ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಕಲಂನುರಿಯಿಂದ ಪುನರಾರಂಭವಾಗಿದೆ. ಜವಹರಲಾಲ್ ನೆಹರೂ ಅವರ 133ನೇ ಜನ್ಮದಿನದ ಅಂಗವಾಗಿ ಅವರ ‘ಡಿಸ್ಕವರಿ ಆಫ್ ಇಂಡಿಯಾ’ ಪುಸ್ತಕದ 600 ಪ್ರತಿಗಳನ್ನು ಯಾತ್ರೆಯಲ್ಲಿ ಭಾಗವಹಿಸಿದವರಿಗೆ ವಿತರಿಸಲಾಯಿತು ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಂ ರಮೇಶ್ ತಿಳಿಸಿದ್ದಾರೆ.
ಭಾರತ್ ಜೋಡೋ ಯಾತ್ರೆಯು ನ.20 ರಂದು ಮಧ್ಯಪ್ರದೇಶವನ್ನು ಪ್ರವೇಶಿಸುವುದಕ್ಕೂ ಮುನ್ನ ಮಹಾರಾಷ್ಟ್ರದ ಐದು ಜಿಲ್ಲೆಗಳಲ್ಲಿ 382 ಕಿಮೀ ಕ್ರಮಿಸಲಿದೆ. ಸೆ.7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆ ಇದುವರೆಗೆ ಆರು ರಾಜ್ಯಗಳ 28 ಜಿಲ್ಲೆಗಳಲ್ಲಿ ಪೂರ್ಣಗೊಂಡಿದೆ. 150 ದಿನಗಳಲ್ಲಿ 12 ರಾಜ್ಯಗಳನ್ನು ಒಳಗೊಂಡಂತೆ 3,570 ಕಿ.ಮೀ. ಪ್ರಯಾಣಿಸಿದ ನಂತರ ಜಮ್ಮು–ಕಾಶ್ಮೀರದಲ್ಲಿ ಯಾತ್ರೆ ಕೊನೆಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.