ADVERTISEMENT

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಅ. 17ರಂದು ಭಾರತ್ ಜೋಡೊ ಯಾತ್ರೆಗೆ ಬ್ರೇಕ್

ಐಎಎನ್ಎಸ್
Published 8 ಅಕ್ಟೋಬರ್ 2022, 9:11 IST
Last Updated 8 ಅಕ್ಟೋಬರ್ 2022, 9:11 IST
   

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆಅಕ್ಟೋಬರ್‌ 17ರಂದು ಚುನಾವಣೆ ನಡೆಯಲಿದ್ದು, ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೊ ಯಾತ್ರೆಗೆ ಆ ದಿನ ಬಿಡುವು ದೊರೆಯಲಿದೆ.

ಭಾರತ್‌ ಜೋಡೊ ಯಾತ್ರೆ ಸದ್ಯ ಕರ್ನಾಟಕದಲ್ಲಿ ಸಾಗುತ್ತಿದೆ. ಮತದಾನ ಮಾಡಲು ಅರ್ಹತೆ ಹೊಂದಿರುವ 40ಕ್ಕೂ ಹೆಚ್ಚು ಪ್ರತಿನಿಧಿಗಳು, ಸಾವಿರಾರು ಜನರು ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರಾಹುಲ್‌ ಗಾಂಧಿ ಸೇರಿದಂತೆ ಎಲ್ಲ ಅರ್ಹರಿಗೂ ಮತದಾನ ಮಾಡಲು ಯಾತ್ರೆ ಸಾಗುವ ಮಾರ್ಗದಲ್ಲಿಯೇ ಮತಗಟ್ಟೆ ತೆರೆಯಲಾಗುವುದು ಎಂದು ಮೂಲಗಳು ತಿಳಿಸಿವೆ.

ಮತದಾರರು ತಮ್ಮ ಹಕ್ಕು ಚಲಾಯಿಸಲು ಗುರುತಿನ ಚೀಟಿ ಹೊಂದಿರಬೇಕು ಎಂದು ಪಕ್ಷದ ಹಿರಿಯ ನಾಯಕ ಜೈರಾಮ್‌ ರಮೇಶ್‌ ಸ್ಪಷ್ಟಪಡಿಸಿದ್ದಾರೆ.

ADVERTISEMENT

ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ, ಹಿರಿಯ ನಾಯಕ ಮಧುಸೂದನ್ ಮಿಸ್ತ್ರಿ ಅವರು ಚುನಾವಣಾ ಪ್ರಕ್ರಿಯೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಪಕ್ಷದ ಅಧ್ಯಕ್ಷೀಯ ಚುನಾವಣೆ ಕುರಿತು ಸೆಪ್ಟೆಂಬರ್‌ 22 ರಂದು ಪ್ರಕಟಣೆ ಹೊರಡಿಸಲಾಗಿತ್ತು. ಸೆಪ್ಟೆಂಬರ್‌ 24 ರಿಂದ 30ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಅಕ್ಟೋಬರ್‌ 1ರಂದು ನಾಮಪತ್ರಗಳ ಪರಿಶೀಲನೆ ನಡೆದಿತ್ತು. ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಹಿಂಪಡೆಯಲು ಅಕ್ಟೋಬರ್‌ 8ರ ವರೆಗೆ ಸಮಯಾವಕಾಶವಿತ್ತು.

ಅಕ್ಟೋಬರ್‌ 17ರಂದು ಚುನಾವಣೆ ನಡೆಯಲಿದ್ದು, ಎರಡು ದಿನಗಳ ಬಳಿಕ (19ರಂದು) ಫಲಿತಾಂಶ ಹೊರಬೀಳಲಿದೆ.

ರಾಜ್ಯಸಭೆ ಸದಸ್ಯಮಲ್ಲಿಕಾರ್ಜುನ ಖರ್ಗೆ ಹಾಗೂಕೇರಳದ ತಿರುವನಂತಪುರ ಸಂಸದ ಶಶಿ ತರೂರ್‌ ಕಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.