ADVERTISEMENT

ಭಾರತ ರತ್ನ: ಅಡ್ವಾಣಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದ ನಿತೀಶ್‌ ಕುಮಾರ್

ಪಿಟಿಐ
Published 8 ಫೆಬ್ರುವರಿ 2024, 13:24 IST
Last Updated 8 ಫೆಬ್ರುವರಿ 2024, 13:24 IST
<div class="paragraphs"><p>ಅಡ್ವಾಣಿ ಅವರನ್ನು ಭೇಟಿ ಮಾಡಿ&nbsp;ನಿತೀಶ್‌ ಕುಮಾರ್ ಅಭಿನಂದಿಸಿದರು.</p></div>

ಅಡ್ವಾಣಿ ಅವರನ್ನು ಭೇಟಿ ಮಾಡಿ ನಿತೀಶ್‌ ಕುಮಾರ್ ಅಭಿನಂದಿಸಿದರು.

   

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಇಂದು (ಗುರುವಾರ) ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಭೇಟಿಯಾಗಿ ‘ಭಾರತ ರತ್ನ‘ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದಿಂದ ಹೊರಬಂದು ಎನ್‌ಡಿಎಗೆ ಸೇರ್ಪಡೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಬುಧವಾರ( ಫೆಬ್ರುವರಿ 8) ದೆಹಲಿಗೆ ಭೇಟಿ ನೀಡಿದ್ದ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು.

ADVERTISEMENT

'ಇಂಡಿಯಾ' ಮೈತ್ರಿಕೂಟದ ಭಾಗವಾಗಿದ್ದಾಗಲೂ ಅಡ್ವಾಣಿ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದ ನಿತೀಶ್‌, ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗಿನ ಸಂಬಂಧವನ್ನು ನೆನಪಿಸಿಕೊಳ್ಳುತ್ತಿದ್ದರು.

ಎಲ್. ಕೆ ಅಡ್ವಾಣಿ (96) ಅವರಿಗೆ ಕಳೆದ ವಾರ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.