ADVERTISEMENT

‘ಸುಪ್ರೀಂ’ ಮೊರೆಹೋದ ರೈತ ಸಂಘಟನೆ ಭಾರತೀಯ ಕಿಸಾನ್‌ ಯೂನಿಯನ್‌ (ಭಾನು ಬಣ)

ಪಿಟಿಐ
Published 11 ಡಿಸೆಂಬರ್ 2020, 20:30 IST
Last Updated 11 ಡಿಸೆಂಬರ್ 2020, 20:30 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ:ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಭಾರತೀಯ ಕಿಸಾನ್‌ ಯೂನಿಯನ್‌ (ಭಾನು ಬಣ), ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ.

ಆರ್‌ಜೆಡಿ ಸಂಸದ ಮನೋಜ್‌ ಝಾ, ಡಿಎಂಕೆ ಸಂಸದ ತಿರುಚ್ಚಿ ಶಿವ ಹಾಗೂ ಛತ್ತೀಸಗಡದ ರಾಕೇಶ್‌ ವೈಷ್ಣವ್‌ ಎಂಬುವರುಈ ಕಾಯ್ದೆಗಳ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಈಚೆಗೆ ವಿಚಾರಣೆಗೆ ಎತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ನೇತೃತ್ವದ ಪೀಠವು ಕೇಂದ್ರಕ್ಕೆ ನೋಟಿಸ್‌ ನೀಡಿತ್ತು. ಈ ಅರ್ಜಿಯಲ್ಲಿ ತನ್ನನ್ನೂ ಕಕ್ಷಿದಾರನನ್ನಾಗಿ ಪರಿಗಣಿಸಬೇಕು ಎಂದು ಭಾರತೀಯ ಕಿಸಾನ್‌ ಯೂನಿಯನ್‌ನ (ಭಾನು ಬಣ) ಅಧ್ಯಕ್ಷ ಭಾನು ಪ್ರತಾಪ್‌ ಸಿಂಗ್‌ ಅರ್ಜಿಯಲ್ಲಿ ಹೇಳಿದ್ದಾರೆ.

ಮೂರು ಕಾಯ್ದೆಗಳು ಜಾರಿಯಲ್ಲಿ ಮುಂದುವರಿದರೆ ಇಡೀ ದೇಶವೇ ನಾಶವಾಗಲಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ಈ ಕಾಯ್ದೆಗಳು ಕಾನೂನುಬಾಹಿರ ಮತ್ತು ಕೃಷಿ ಉತ್ಪನ್ನಗಳ ವಾಣಿಜ್ಯೀಕರಣಕ್ಕೆ ಆಸ್ಪದ ಕೊಡುತ್ತವೆ ಎಂದೂ ಹೇಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.