ನೇಹಾ ಸಿಂಗ್
ಲಖನೌ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಆರೋಪದಲ್ಲಿ ಖ್ಯಾತ ಬೋಜ್ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.
ನೇಹಾ ಅವರು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಮತ್ತು ದೇಶ ವಿರೋಧಿ ಹೇಳಿಕೆ ನೀಡಲು ಸಾಮಾಜಿಕ ಜಾಲತಾಣ ಖಾತೆಯನ್ನು ಬಳಸಿಕೊಂಡಿದ್ದಾರೆ ಎಂದು ಅಭಯ್ ಸಿಂಗ್ ಅವರು ದೂರು ನೀಡಿದ್ದರು. ಇದರ ಆಧಾರದಲ್ಲಿ ಹಜರತ್‌ಗಂಜ್ ಠಾಣೆಯಲ್ಲಿ ನೇಹಾ ಅವರ ವಿರುದ್ಧ ಭಾನುವಾರ ರಾತ್ರಿ ಎಫ್‌ಐಆರ್ ದಾಖಲಿಸಲಾಗಿದೆ.
ನೇಹಾ ಅವರು ‘ಎಕ್ಸ್’ನಲ್ಲಿ ಸರ್ಕಾರದ ವೈಫಲ್ಯದ ಪರಿಣಾಮವಾಗಿ ಪಹಲ್ಗಾಮ್ ದಾಳಿ ನಡೆದಿದೆ. ಬಿಜೆಪಿಯು ಈ ದಾಳಿಯನ್ನು ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮತ ಗಳಿಕೆಗೆ ಬಳಸಿಕೊಳ್ಳಲಿದೆ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.