
ಪ್ರಜಾವಾಣಿ ವಾರ್ತೆ
ಗುವಾಹಟಿ: ಅಸ್ಸಾಂ ಕಾಂಗ್ರೆಸ್ ಪ್ರದೇಶ ಸಮಿತಿಯ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರು ಆಡಳಿತಾರೂಢ ಬಿಜೆಪಿಗೆ ಸೇರಿ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಬೋರಾ ನಿವಾಸಕ್ಕೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಶರ್ಮ ಬಿಸ್ವಾ ಅವರು ಮಂಗಳವಾರ ಸಂಜೆ ಭೇಟಿ ನೀಡಿದ್ದು. ಆ ಭೇಟಿಯ ಬೆನ್ನಲ್ಲೇ ಬೋರಾ ಅವರು, ‘ನಾನು ಫೆಬ್ರುವರಿ 22ರಂದು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ’ ಎಂದು ಘೋಷಣೆ ಮಾಡಿದ್ದಾರೆ.
ಪಕ್ಷದ ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನದ ಹೊಂದಿದ್ದ ಬೋರಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋಮವಾರ ರಾಜೀನಾಮೆ ಪತ್ರ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.