ADVERTISEMENT

ಗುಜರಾತ್‌: ಇಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

ಪಿಟಿಐ
Published 16 ಸೆಪ್ಟೆಂಬರ್ 2021, 6:19 IST
Last Updated 16 ಸೆಪ್ಟೆಂಬರ್ 2021, 6:19 IST
ಭೂಪೇಂದ್ರ ಪಟೇಲ್
ಭೂಪೇಂದ್ರ ಪಟೇಲ್   

ಅಹಮದಾಬಾದ್‌: ಗುಜರಾತ್‌ನ ಭೂಪೇಂದ್ರ ಪಟೇಲ್‌ ನೇತೃತ್ವದ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಗುರುವಾರ ಮಧ್ಯಾಹ್ನ 1.30ಕ್ಕೆ ಗಾಂಧಿನಗರದ ರಾಜಭವನದಲ್ಲಿ ನಡೆಯಲಿದೆ.

ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇದ್ದು, ಈ ಸಮಯದಲ್ಲಿ ಬಿಜೆಪಿ ನೂತನ ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಿಜೆಪಿಯ ‘ಪುನರಾವರ್ತನೆ ಇಲ್ಲ‘ ಎಂಬ ಸೂತ್ರದ ಹಿನ್ನೆಲೆಯಲ್ಲಿ, ನೂತನ ಸಚಿವರ ಹೆಸರನ್ನು ಗೌಪ್ಯವಾಗಿಡಲಾಗಿದ್ದು, ಯಾರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂಬುದನ್ನು ಘೋಷಿಸಿಲ್ಲ.

ADVERTISEMENT

ಇದಕ್ಕೂ ಮುನ್ನ ಬಿಜೆಪಿ, ಬುಧವಾರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಿಸಿತ್ತು. ಈ ಸಂಬಂಧ ರಾಜಭವನದಲ್ಲಿ ಸಿದ್ಧತೆ ನಡೆದಿತ್ತು. ಆದರೆ, ದಿಢೀರನೆ ಕಾರ್ಯಕ್ರಮದಲ್ಲಿ ಬದಲಾವಣೆಯಾದ್ದರಿಂದ, ಸಮಾರಂಭಕ್ಕಾಗಿ ಕಟ್ಟಿದ್ದ ಬ್ಯಾನರ್‌ಗಳನ್ನು ತೆಗೆಯಲಾಗಿತ್ತು.

ನಂತರ, ಬುಧವಾರ ಸಂಜೆ ಮುಖ್ಯಮಂತ್ರಿ ಕಚೇರಿಯಿಂದ ‘ಹೊಸ ಸಚಿವರ ಪ್ರಮಾಣ ವಚನ ಸಮಾರಂಭ ಗುರುವಾರ ಮಧ್ಯಾಹ್ನ 1.30ಕ್ಕೆ ರಾಜಧಾನಿ ಗಾಂಧಿನಗರದಲ್ಲಿರುವ ರಾಜಭವನದಲ್ಲಿ ನಡೆಯಲಿದೆ‘ ಎಂಬ ಪ್ರಕಟಣೆ ಹೊರಬಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.